ಪ್ರಜಾಸ್ತ್ರ ಸುದ್ದಿ
ಮುಧೋಳ: ಘಟಪ್ರಭಾ ನದಿಯ ಸೇತುವೆಗೆ ದಂಪತಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಸಾಲದ ಹಿನ್ನಲೆಯಲ್ಲಿ ಈ ರೀತಿ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ. ಆದರೆ, ಇದಕ್ಕೆ ನಿಜವಾದ ಕಾರಣ ಏನೆಂದು ತಿಳಿದು ಬರಬೇಕಿದೆ. ಪತಿ ಹಾಗೂ ಪತ್ನಿ ಇಬ್ಬರು ಸೇತುವೆಗೆ ನೇಣು ಹಾಕಿಕೊಂಡಿದ್ದಾರೆ. ಮೆಟಗುಡ್ಡ ಗ್ರಾಮದವರೆಂದು ತಿಳಿದು ಬಂದಿದೆ. ಈ ಕುರಿತು ಇನ್ನು ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.