ಪ್ರಜಾಸ್ತ್ರ ಸುದ್ದಿ
ಕೋಲ್ಕತ್ತಾ(Kolkta): ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನ ಗುರುವಾರ ನಡೆದಿದೆ. ಆದರೆ, ಮುರ್ಶಿದಾಬಾದ್ ಜಿಲ್ಲೆಯ ನೋಯ್ಡಾದಲ್ಲಿ ಮತಕೇಂದ್ರದ ಬಳಿ ಕಚ್ಚಾ ಬಾಂಬ್ ಸ್ಫೋಟಿಸಲಾಗಿದೆ. ಇದರಿಂದಾಗಿ 7 ಜನರು ಗಾಯಗೊಂಡಿದ್ದಾರೆ. ಈ ಮೂಲಕ ಮತದಾನದ ಸಂದರ್ಭದಲ್ಲಿ ಹಿಂಸಾಚಾರ ನಡೆದಿದೆ.
ಶಿವನಗರದ ಪ್ರಾಥಮಿಕ ಶಾಲೆಯ ಹತ್ತಿರ ಕಚ್ಚಾ ಬಾಂಬ್ ಎಸೆಯಲಾಗಿದೆ. ಈ ವೇಳೆ ಟಿಎಂಸಿ ಅಭ್ಯರ್ಥಿ ಸಾಹಿನಾ ಮುಮ್ತಾಜ್ ಸಹ ಅಲ್ಲೆ ಇದ್ದರಂತೆ. ಇದರ ಹಿಂದೆ ಹುಮಾಯುನ್ ಕಬೀರ್ ಅವರ ಆಮ್ ಜನತಾ ಉನ್ನಯನ್ ಪಕ್ಷದ ಕಾರ್ಯಕರ್ತರ ಕೈವಾಡವಿದೆ ಎಂದು ಟಿಎಂಸಿ ಸಂಸದ ಅಬು ತಹೇರ್ ಖಾನ್ ಆರೋಪಿಸಿದ್ದಾರೆ.




