Ad imageAd image

ಕಾರಿನೊಳಗೆ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ

ಕಾರಿನೊಳಗೆ ವ್ಯಕ್ತಿಯೊಬ್ಬನ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕೊಳ್ಳೇಗಾಲ ತಾಲೂಕಿನ ಸತ್ತೇಗಾಲ ಹ್ಯಾಂಡ್ ಪೋಸ್ಟ್ ಹತ್ತಿರ

Nagesh Talawar
ಕಾರಿನೊಳಗೆ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಚಾಮರಾಜನಗರ(Chamarajanagara): ಕಾರಿನೊಳಗೆ ವ್ಯಕ್ತಿಯೊಬ್ಬನ ಶವ(Dead Body) ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕೊಳ್ಳೇಗಾಲ ತಾಲೂಕಿನ ಸತ್ತೇಗಾಲ ಹ್ಯಾಂಡ್ ಪೋಸ್ಟ್ ಹತ್ತಿರ ನಿಲ್ಲಿಸಿದ್ದ ಸ್ವಿಫ್ಟ್ ಕಾರಿನ ಹಿಂಬದಿ ಸೀಟ್ ನಲ್ಲಿ ಅಂದಾಜು 40 ರಿಂದ 45 ವರ್ಷದ ವ್ಯಕ್ತಿಯೊಬ್ಬ ಮೃತದೇಹ ಪತ್ತೆಯಾಗಿದೆ. ವಾಸನೆ ಬರುತ್ತಿದ್ದರಿಂದ ಸಾರ್ವಜನಿಕರು ಗಮನಿಸಿದ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ.

ಕಾರಿನಲ್ಲಿದ್ದ(Car) ಶವದ ಮೈ ಮೇಲೆ ಬನಿಯನ್ ಹಾಗೂ ಚಡ್ಡಿಯಿದೆ. ಇದೊಂದು ಕೊಲೆ ಎಂದು ಶಂಕಿಸಲಾಗಿದೆ. ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಈ ಒಂದು ಪ್ರಕರಣ ನಡೆದಿದೆ. ಸ್ಥಳಕ್ಕೆ ಸಿಪಿಐ, ಕ್ರೈಂ ಪಿಎಸ್ಐ, ಎಸ್ಐ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಕುರಿತು ತನಿಖೆ ನಡೆಸಲಾಗುತ್ತಿದೆ.

WhatsApp Group Join Now
Telegram Group Join Now
Share This Article