ಪ್ರಜಾಸ್ತ್ರ ಸುದ್ದಿ
ನವದೆಹಲಿ(New Delhi): ಪ್ರಧಾನಿ ಮೋದಿ ದೆಹಲಿಯ ಕೆಂಪುಕೋಟೆಯ(Red fort) ಮೇಲೆ ಧ್ವಜಾರೋಹಣ ಮಾಡುವ ಮೂಲಕ 78ನೇ ಸ್ವಾತಂತ್ರ್ಯೋತ್ಸವ(Independence day) ಆಚರಿಸಲಾಯಿತು. ಈ ಮೂಲಕ ಐತಿಹಾಸಿಕ ದಾಖಲೆಯನ್ನು ಸಹ ಮಾಡಿದರು. 3ನೇ ಅವಧಿಗೆ ಪ್ರಧಾನಿಯಾಗಿರುವ ಅವರು ನೆಹರು, ಇಂದಿರಾ ಗಾಂಧಿ ನಂತರದಲ್ಲಿ ಈ ಸಾಧನೆ ಮಾಡಿದವರಾಗಿದ್ದಾರೆ.
ಧ್ವಜಾರೋಹಣಕ್ಕೂ ಮೊದಲು ರಾಜ್ ಘಾಟ್ ನಲ್ಲಿರುವ ಮಹಾತ್ಮ(mahatma gandhi) ಗಾಂಧಿಯವರ ಸಮಾಧಿಗೆ ಗೌರವ ನಮನ ಸಲ್ಲಿಸಿದರು. ನಂತರ ಅಲ್ಲಿಂದ ಕೆಂಪುಕೋಟೆಯತ್ತ ಪ್ರಯಾಣ ಬೆಳೆಸಿದರು. ಮೂರು ಸೇನಾ ಪಡೆಗಳಿಂದ ಗೌರವ ಸಲ್ಲಿಸಲಾಯಿತು. ನಂತರ ಧ್ವಜಾರೋಹಣ ನೆರವೇರಿಸಿದರು. ಈ ವೇಳೆ ಮಾತನಾಡಿದ ಅವರು, ವಾಯನಾಡ್ ಸಂತ್ರಸ್ತರು ಸೇರಿದಂತೆ ಪ್ರಕೃತಿ ವಿಕೋಪದಿಂದ ಜೀವ ಕಳೆದುಕೊಂಡ ಪ್ರತಿಯೊಬ್ಬರ ಕುಟುಂಬಕ್ಕೂ ಸಂತಾಪ ಸೂಚಿಸಿದರು.
2047ರ ವೇಳೆಗೆ ವಿಕಸಿತ ಭಾರತ ಗುರಿಯನ್ನು ಹೊಂದಲಾಗಿದೆ. ಇದು 140 ಕೋಟಿ ಭಾರತೀಯರ ಕನಸಾಗಿದೆ ಹಾಗೂ ಸಂಕಲ್ಪವಾಗಿದೆ. ಈ ಮೂಲಕ ಭಾರತ ಅಭಿವೃದ್ಧಿ ಹೊಂದಿದ ದೇಶವಾಗಲಿದೆ ಎಂದರು. ದೇಶಕ್ಕಾಗಿ ಪ್ರಾಣ ಅರ್ಪಿಸಿದ ಹೋರಾಟಗಾರರೆಲ್ಲರನ್ನು ಸ್ಮರಿಸಿಕೊಳ್ಳುವ ದಿನವೆಂದು ಹೇಳಿದರು. ಈ ವೇಳೆ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ, ಕೇಂದ್ರ ಗೃಹ ಸಚವಿ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ವಿತ್ ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ ಗಣ್ಯಾತಿಗಣ್ಯರು, ವಿಶೇಷ ಆಹ್ವಾನಿತರು ಭಾಗವಹಿಸಿದ್ದರು.