ಪ್ರಜಾಸ್ತ್ರ ಸುದ್ದಿ (ಸಾಂದರ್ಭಿಕ ಚಿತ್ರ)
ಕೊಪ್ಪಳ(Koppala): ಬೀದಿನಾಯಿಯೊಂದು 30ಕ್ಕೂ ಹೆಚ್ಚು ಜನರ ಮೇಲೆ ದಾಳಿ ಮಾಡಿದ್ದು, ಬಾಲಕನೊಬ್ಬನಿಗೆ ಗಂಭೀರವಾದ ಗಾಯಗಳಾದ ಘಟನೆ ಕುಕನೂರು ತಾಲೂಕಿನ ತಳಕಲ್-ತಳಬಾಳ ಗ್ರಾಮದಲ್ಲಿ ಶನಿವಾರ ನಡೆದಿದೆ. 8 ವರ್ಷದ ಯಮನೂರಸಾಬ್ ನದಾಫ್ ಎನ್ನುವ ಬಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ.
ಬಾಲಕನಿಗೆ ಮೊದಲು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ನಂತರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಏಕಾಏಕಿ ರಸ್ತೆಯಲ್ಲಿ ಕಂಡ ಕಂಡವರ ಮೇಲೆ ನಾಯಿ ದಾಳಿ ಮಾಡಿದೆ. ಇದರಿಂದಾಗಿ 30ಕ್ಕೂ ಹೆಚ್ಚು ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ.