Ad imageAd image

ಬೆಳಗಾವಿ: ನಗರದ ಪ್ರತಿಷ್ಠಿತ ಹೋಟೆಲ್‌ನಲ್ಲಿ ಬೆಂಕಿ ಅನಾಹುತ

Nagesh Talawar
ಬೆಳಗಾವಿ: ನಗರದ ಪ್ರತಿಷ್ಠಿತ ಹೋಟೆಲ್‌ನಲ್ಲಿ ಬೆಂಕಿ ಅನಾಹುತ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಬೆಳಗಾವಿ(Belagavi): ನಗರದ ಅತ್ಯಂತ ಜನನಿಬಿಡ ಪ್ರದೇಶವಾದ ಕ್ಲಬ್ ರಸ್ತೆಯಲ್ಲಿರುವ ಪ್ರತಿಷ್ಠಿತ ‘ಈಫಾ’ ಹೋಟೆಲ್‌ನಲ್ಲಿ ಇಂದು ಬೆಂಕಿ ಕಾಣಿಸಿಕೊಂಡಿದ್ದು, ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಹೋಟೆಲ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಪ್ರಾಥಮಿಕವಾಗಿ ಶಂಕಿಸಲಾಗಿದೆ. ಹೋಟೆಲ್‌ನಿಂದ ದಟ್ಟವಾದ ಹೊಗೆ ಬರುತ್ತಿದ್ದಂತೆಯೇ ಎಚ್ಚೆತ್ತ ಸಿಬ್ಬಂದಿ ತಕ್ಷಣವೇ ಒಳಗಿದ್ದ ಗ್ರಾಹಕರನ್ನು ಸುರಕ್ಷಿತವಾಗಿ ಹೊರಗೆ ಕಳುಹಿಸುವಲ್ಲಿ ಯಶಸ್ವಿಯಾಗಿದ್ದಾರೆ.

​ ಘಟನೆ ಸಂಭವಿಸುತ್ತಿದ್ದಂತೆಯೇ ಹೋಟೆಲ್ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಟ್ಟರು. ಆದರೆ, ಈ ವೇಳೆ ಸುದ್ದಿಗಾರರು ಅಥವಾ ಸಾರ್ವಜನಿಕರು ವಿಡಿಯೋ ಚಿತ್ರೀಕರಣ ಮಾಡದಂತೆ ಸಿಬ್ಬಂದಿ ತಡೆಯೊಡ್ಡಿ, ಅವಾಜ್ ಹಾಕಿದ್ದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದರು. ಕ್ಯಾಂಪ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

WhatsApp Group Join Now
Telegram Group Join Now
Share This Article