ಪ್ರಜಾಸ್ತ್ರ ಸುದ್ದಿ
ಕಲಬುರಗಿ(Kalaburagi): ನಗರದ ಹುಮನಾಬಾದ್ ರಿಂಗ್ ರೋಡ್ ಪ್ರದೇಶದಲ್ಲಿರುವ ಓಲಾ ಎಲೆಕ್ಟ್ರಿಕ್ ಬೈಕ್(Bike showroom) ಶೋರೂಂನಲ್ಲಿ ಮಂಗಳವಾರ ಬೆಂಕಿ(Fire accident) ಅನಾಹುತ ಸಂಭವಿಸಿದೆ. ಇದರಿಂದಾಗಿ ಆರು ಬೈಕ್ ಗಳು ಸುಟ್ಟು ಕರಕಲಾಗಿವೆ. ಇದರ ಜೊತೆಗೆ ಅಪಾರ ಪ್ರಮಾಣದ ಹಾನಿಯಾಗಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಈ ಅವಗಡ ನಡೆದಿದೆ ಎಂದು ಹೇಳಲಾಗುತ್ತಿದೆ.
ಬೈಕ್ ಜೊತೆಗೆ ಲಾಪ್ ಟಾಪ್, ಎಸಿ ಸೇರಿ ದಾಖಲೆ ಪತ್ರಗಳು ಸಹ ಸುಟ್ಟು ಹೋಗಿವೆ. ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯ ನಡೆಸಿದರು. ಚೌಕ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಈ ಸಂಬಂಧ ತನಿಖೆ ನಡೆದು, ಯಾವ ಕಾರಣದಿಂದ ಬೆಂಕಿ ಹೊತ್ತಿಕೊಂಡಿದೆ ಎನ್ನುವುದು ತಿಳಿದು ಬರಲಿದೆ.