ಪ್ರಜಾಸ್ತ್ರ ಸುದ್ದಿ
ಬೆಳಗಾವಿ(Belagavi): ಕೇವಲ 500 ರೂಪಾಯಿಗಾಗಿ ಸ್ನೇಹಿತನನ್ನು ಕೊಲೆ ಮಾಡಿದ ಘಟನೆ ತಾಲೂಕಿನ ಯಳ್ಳೂರು ಗ್ರಾಮದಲ್ಲಿ ಸೋಮವಾರ ನಡೆದಿದೆ. ಹುಸೇನ್ ತಾಸೇವಾಲೆ(45) ಕೊಲೆಯಾದ ವ್ಯಕ್ತಿಯಾಗಿದ್ದಾನೆ. ಮಿಥುನ್ ತುಬಚಿ ಹಾಗೂ ವಿನೋದ ಇಂಗಳೆ ಎಂಬುವರನ್ನು ಗ್ರಾಮೀಣ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಇವರೆಲ್ಲ ಒಟ್ಟಿಗೆ ಗುಜರಿ ವ್ಯಾಪಾರ ಮಾಡುತ್ತಿದ್ದರು. ಹುಸೇನ್ 500 ರೂಪಾಯಿ ಬಾಕಿ ಕೊಡುವುದಿತ್ತು. ಈ ವಿಚಾರವಾಗಿ ಜಗಳವಾಗಿದೆ. ಮನೆಗೆ ನುಗ್ಗಿ ಹಲ್ಲೆ ಮಾಡಿದ್ದಾರೆ. ಬಿಡಿಸಲು ಹೋದ ಆತನ ತಾಯಿಯನ್ನು ತಳ್ಳಿದ್ದಾರೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಹುಸೇನ್ ಜಿಲ್ಲಾಸ್ಪತ್ರೆಯಲ್ಲಿ ಸೋಮವಾರ ಮೃತಪಟ್ಟಿದ್ದಾನೆ.