ಪ್ರಜಾಸ್ತ್ರ ಸುದ್ದಿ
ಬೆಳಗಾವಿ(Belagavi): ಸೇಬು ಸಾಗಿಸುತ್ತಿದ್ದ ಗೂಡ್ಸ್ ವಾಹನ ನಗರದ ಹತ್ತಿರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಪಲ್ಟಿಯಾಗಿದೆ. ಅದೃಷ್ಟವಶಾತ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಲಕ್ಷಾಂತರ ರೂಪಾಯಿ ಮೌಲ್ಯದ ಸೇಬು ರಸ್ತೆಯ ತುಂಬೆಲ್ಲ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು. ಇದರಿಂದಾಗಿ ಸಾಕಷ್ಟು ಟ್ರಾಫಿಕ್ ಜಾಮ್ ಆಗಿತ್ತು.
ಮುಂಬೈಯಿಂದ ದಾವಣಗೆರೆಗೆ ಸೇಬು ಹಣ್ಣುಗಳನ್ನು ಸಾಗಿಸಲಾಗುತ್ತಿತ್ತು. ಚಾಲಕನ ನಿಯಂತ್ರಣ ತಪ್ಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಪಲ್ಟಿಯಾಗಿದೆ. ಉತ್ತರ ಸಂಚಾರಿ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ಕೊಟ್ಟು ಪರಿಶೀಲನೆ ನಡೆಸಿದರು. ಕ್ರೇನ್ ಮೂಲಕ ಗೂಡ್ಸ್ ವಾಹನವನ್ನು ಎತ್ತಿ ಪಕ್ಕಕ್ಕೆ ಸರಿಸಲಾಗಿದೆ.




