ಪ್ರಜಾಸ್ತ್ರ ಸುದ್ದಿ
ಶಿವಮೊಗ್ಗ(Shivamogga): ಪತಿಯೇ ಪತ್ನಿಯನ್ನು ಹತ್ಯೆ ಮಾಡಿದ ಘಟನೆ ಜಿಲ್ಲೆಯ ಶಿಕಾರಿಪುರ ನಗರದ ರಾಘವೇಂದ್ರ ಬಡಾವಣೆಯಲ್ಲಿ ನಡೆದಿದೆ. ರೇಣುಕಾ(40) ಕೊಲೆಯಾದ ದುರ್ದೈವಿ ಮಹಿಳೆಯಾಗಿದ್ದಾಳೆ. ಪತಿ ನಾಗರಾಜ್ ಕೊಲೆ ಆರೋಪಿಯಾಗಿದ್ದಾನೆ. ಟೌನ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಆಯುಧವೊಂದರಿಂದ ಹಲ್ಲೆ ಮಾಡಿ ಹತ್ಯಗೈದಿದ್ದಾನೆ.
ಅನೈತಿಕ ಸಂಬಂಧ ಕಾರಣಕ್ಕೆ ಈ ಕೊಲೆ ನಡೆದಿದೆ ಹೇಳಲಾಗುತ್ತಿದೆ. ಕಳೆದ ರಾತ್ರಿ ಗಂಡ, ಹೆಂಡತಿ ನಡುವೆ ಇದೇ ವಿಚಾರಕ್ಕೆ ಜಗಳ ನಡೆದಿದೆಯಂತೆ. ಅದು ತಡರಾತ್ರಿಯವರೆಗೂ ಹೋಗಿದೆ. ನಸುಕಿನ ಜಾವ ಸುಮಾರು 4 ಗಂಟೆಯ ವೇಳೆ ಪತ್ನಿಯ ಮೇಲೆ ಹರಿತವಾದ ಆಯುಧದಿಂದ ಹಲ್ಲೆ ಮಾಡಿ ಕೊಲೆ ಮಾಡಿದ್ದಾನೆ ಎಂದು ಹೇಳಲಾಗುತ್ತಿದೆ. ಕೊಲೆಗೆ ನಿಖರ ಕಾರಣ ಪೊಲೀಸ್ ತನಿಖೆಯಿಂದ ತಿಳಿದು ಬರಬೇಕಿದೆ.