ಪ್ರಜಾಸ್ತ್ರ ಸುದ್ದಿ
ಶಿವಮೊಗ್ಗ(Shivamogga): ಗಾಂಜಾ ಮಾರಾಟ ಪ್ರಕರಣದ ಆರೋಪಿಯನ್ನು ಬಂಧಿಸಲು ಹೋದಾಗ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿ ತಪ್ಪಿಸಿಕೊಳ್ಳಲು ಹೋದಾಗ ಆತನ ಕಾಲಿಗೆ ಗುಂಡು ಹಾರಿಸಲಾಗಿದೆ. ಭದ್ರಾವತಿಯಲ್ಲಿ ಈ ಘಟನೆ ನಡೆದಿದ್ದು, ಆರೋಪಿ ನಝರುಲ್ಲಾ ಎಂಬಾತನ ಕಾಲಿಗೆ ಪೊಲೀಸರು ಗುಂಡು ಹಾರಿಸಿ ವಶಕ್ಕೆ ಪಡೆದಿದ್ದಾರೆ. ಇದೀಗ ಈತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಭದ್ರಾವತಿ ಹಳೆ ನಗರ ಪೊಲೀಸ್ ಠಾಣೆಯಲ್ಲಿ ಆರೋಪಿ ನಝರುಲ್ಲಾ ಮೇಲೆ ಗಾಂಜಾ ಮಾರಾಟದ ಪ್ರಕರಣ ದಾಖಲಾಗಿತ್ತು. ಹೀಗಾಗಿ ಆತನನ್ನು ಬಂಧಿಸಲು ಪೊಲೀಸರು ತೆರಳಿದ್ದರು. ಈ ವೇಳೆ ಅವರ ಮೇಲೆ ಹಲ್ಲೆಗೆ ಯತ್ನಿಸಿದ್ದರಿಂದ ಆತ್ಮರಕ್ಷಣೆಗಾಗಿ ಗುಂಡು ಹಾರಿಸಲಾಗಿದೆ ಎಂದು ತಿಳಿಸಲಾಗಿದೆ.