Ad imageAd image

ಪತ್ನಿಯನ್ನು ಹತ್ಯೆ ಮಾಡಿದ ಪತಿ

Nagesh Talawar
ಪತ್ನಿಯನ್ನು ಹತ್ಯೆ ಮಾಡಿದ ಪತಿ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಬೆಂಗಳೂರು(Bengaloru): ಕುಡಿದ ನಶೆಯಲ್ಲಿ ಪತ್ನಿಯನ್ನು ಹತ್ಯೆ ಮಾಡಿ ಪತಿ ಪರಾರಿಯಾಗಿರುವ ಘಟನೆ ಮೈಕೋ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಗೌರಮ್ಮ(45) ಕೊಲೆಯಾದ ಮಹಿಳೆಯಾಗಿದ್ದಾರೆ. ಕೊಲೆ ಆರೋಪಿ ಪತಿ ನಾಗರಾಜ್ ಪರಾರಿಯಾಗಿದ್ದು, ಪೊಲೀಸರು ಆತನ ಬಂಧನಕ್ಕೆ ಬಲೆ ಬೀಸಿದ್ದಾರೆ.

ಜಗಳೂರು ನಿವಾಸಿಗಳಾದ ದಂಪತಿ ಉದ್ಯೋಗ ಹಿನ್ನಲೆಯಲ್ಲಿ ಬೆಂಗಳೂರಿಗೆ ಬಂದು ನೆಲೆಸಿದ್ದಾರೆ. ನಾಗರಾಜ ಖಾಸಗಿ ಸಂಸ್ಥೆಯಲ್ಲಿ ಸೆಕ್ಯೂರಿಟಿ ಗಾರ್ಡ್ ಕೆಲಸ ಮಾಡುತ್ತಿದ್ದಾನೆ. ಮೂವರು ಮಕ್ಕಳಿದ್ದು, ಇವರು ಕ್ಯಾಟರಿಂಗ್ ನಲ್ಲಿ ಕೆಲಸ ಮಾಡುತ್ತಿದ್ದಾರೆ. ಕಳೆದ ರಾತ್ರಿ ಗಂಡ, ಹೆಂಡತಿ ನಡುವೆ ಜಗಳವಾಗಿದೆ. ಈ ವೇಳೆ ಅದು ವಿಕೋಪಕ್ಕೆ ಹೋಗಿದ್ದು, ಮೊದಲೆ ಕುಡಿದ ನಶೆಯಲ್ಲಿದ್ದ ನಾಗರಾಜ್ ಮಾರಕಾಸ್ತ್ರದಿಂದ ಹಲ್ಲೆ ಮಾಡಿದ್ದಾನೆ. ಪತ್ನಿ ಮೃತಪಟ್ಟಿದ್ದಾರೆ. ಮೈಕೋ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸಿದ್ದಾರೆ.

WhatsApp Group Join Now
Telegram Group Join Now
Share This Article