ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಜಾಲಹಳ್ಳಿ ಮಾರ್ಗದ ಮೆಟ್ರೋ ಹಳಿಗೆ ಹಾರಿ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ್ದು, ಮೆಟ್ರೋ ಸಿಬ್ಬಂದಿ ಕೂಡಲೇ ಆತನನ್ನು ರಕ್ಷಣೆ ಮಾಡಿದ್ದಾರೆ. ಬಿಹಾರ ಮೂಲದ ಅನಿಲ್ ಕುಮಾರ್ ಪಾಂಡೆ(49) ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯಾಗಿದ್ದಾನೆ. ಮುಂಜಾನೆ 10.20ರ ಸುಮಾರಿಗೆ ಮೆಟ್ರೋ ರೈಲು ಹಸಿರು ಮಾರ್ಗದಲ್ಲಿ ಬರುವ ಸಂದರ್ಭದಲ್ಲಿ ಹಾರಿದರು.
ಹೀಗೆ ಮೆಟ್ರೋ ಹಳಿಗೆ ಹಾರಿದ ವ್ಯಕ್ತಿಯ ರಕ್ಷಣೆಗೆ ಸಿಬ್ಬಂದಿ ಕೂಡಲೇ ಎಮರ್ಜನ್ಸಿ ಟ್ರಿಪ್ ಸಿಸ್ಟಮ್ ಬಂದ್ ಮಾಡಿದ್ದರು. ಮೆಟ್ರೋ ಸಂಚಾರ ಸ್ಥಗಿತಗೊಳಿಸಿದ್ದರು. ಈ ವೇಳೆ ವ್ಯಕ್ತಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಆತನನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಿಂದಾಗಿ 20 ನಿಮಿಷಗಳ ಕಾಲ ಸಂಚಾರ ವ್ಯತ್ಯಯವಾಯಿತು. ಆತ್ಮಹತ್ಯೆಗೆ ಕಾರಣ ಏನು ಅನ್ನೋದು ಪೊಲೀಸ್ ತನಿಖೆಯಿಂದ ತಿಳಿದು ಬರಲಿದೆ.