ಪ್ರಜಾಸ್ತ್ರ ಸುದ್ದಿ
ಚಿತ್ರದುರ್ಗ(Chitradurga): ಡಿವೈಡರ್ ಗೆ ಡಿಕ್ಕಿಯಾಗಿ ಖಾಸಗಿ ಬಸ್ ವೊಂದು ಪಲ್ಟಿಯಾದ ಘಟನೆ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಬುಡ್ನಹಟ್ಟಿ ಹತ್ತಿರ ಭಾನುವಾರ ಮುಂಜಾನೆ ನಡೆದಿದೆ. ಸುಮಾರು 9ಗಂಟೆಯ ವೇಳೆ ರಾಷ್ಟ್ರೀಯ ಹೆದ್ದಾರಿ 150ರಲ್ಲಿ ಅಪಘಾತ ಸಂಭವಿಸಿದೆ. ಬಸ್ಸಿನಲ್ಲಿ 50ಕ್ಕೂ ಹೆಚ್ಚು ಪ್ರಯಾಣಿಕರಿದ್ದರು. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ. ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಡ್ರೈವರ್ ಪಕ್ಕದಲ್ಲಿ ಪರಿವಾಳ ತುಂಬಿದ ಬಾಕ್ಸ್ ಇಡಲಾಗಿದೆ. ಅವರು ಹಾರಲು ಪ್ರಯತ್ನಿಸುತ್ತಿದ್ದಾಗ ಚಾಲಕ ಹಿಡಿಯಲು ಹೋಗಿದ್ದಾನೆ. ಇದರಿಂದಾಗಿ ನಿಯಂತ್ರಣ ಕಳೆದುಕೊಂಡು ಡಿವೈಡರ್ ಗೆ ಡಿಕ್ಕಿಯಾಗಿ ಪಲ್ಟಿಯಾಗಿದೆ. ಮೊಳಕಲ್ಮೂರಿನಿಂದ ಚಳ್ಳಕೆರೆ ಕಡೆ ಬರುವಾಗ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು.