ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ರಸ್ತೆಗುಂಡಿ ತಪ್ಪಿಸಲು ಹೋಗಿ ಬೈಕ್ ನಿಂದ ಪದವಿ ವಿದ್ಯಾರ್ಥಿನಿ ಕೆಳಗೆ ಬಿದ್ದಿದ್ದಾಳೆ. ಈ ವೇಳೆ ಟಿಪ್ಪರ್ ಹರಿದು ಮೃತಪಟ್ಟ ಘಟನೆ ಸಿಲಿಕಾನ್ ಸಿಟಿಯಲ್ಲಿ ಸೋಮವಾರ ನಡೆದಿದೆ. ಬೂದಿಗೆರೆ ಕ್ರಾಸ್ ಹತ್ತಿರ ಈ ಘಟನೆ ನಡೆದಿದ್ದು, ದ್ವಿತೀಯ ವರ್ಷದ ಬಿ.ಕಾಂ ವಿದ್ಯಾರ್ಥಿನಿ ಧನುಶ್ರೀ ಮೃತ ದುರ್ದೈವಿಯಾಗಿದ್ದಾರೆ.
ಕೆ.ಆರ್ ಪುರಂ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಅಪಘಾತ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಭಾನುವಾರವಷ್ಟೇ ಮುಖ್ಯಮಂತ್ರಿ ಸಿದ್ದರಾಮಯ್ಯ ನಗರ ಸಂಚರಿಸಿ ರಸ್ತೆ ಗುಂಡಿಗಳನ್ನು ದುರಸ್ತಿ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದರು. ಅಷ್ಟರಲ್ಲೇ ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ.