ಪ್ರಜಾಸ್ತ್ರ ಸುದ್ದಿ
ಹೊಸಪೇಟೆ(Hosapete): ಅನಾರೋಗ್ಯದಿಂದ ತಂದೆ ಸಾವಿನ ನೋವಿನಲ್ಲಿ ಎಸ್ಎಸ್ಎಲ್ ಸಿ ವಿದ್ಯಾರ್ಥಿ ಇಂದು ಸಮಾಜ ವಿಜ್ಞಾನ ಪರೀಕ್ಷೆ ಬರೆದ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆಯ ಟಿಬಿ ಡ್ಯಾಂನ ಸಂತ್ ಜೋಸೆಫ್ ಶಾಲೆಯಲ್ಲಿ ನಡೆದಿದೆ. ಹರಿಧರನ್ ತಾಲೂಕಿನ ಸಬಾ ಪದವಿ ಪೂರ್ವ ಕಾಲೇಜಿನಲ್ಲಿ ಪರೀಕ್ಷೆ ಬರೆದಿದ್ದಾನೆ. ಶಿಕ್ಷಕರು ಆತನಿಗೆ ಧೈರ್ಯ ತುಂಬಿದ್ದಾರೆ.
ಹರಿಧರನ್ ತಂದೆ ಸೆಲ್ವಿಕುಟ್ಟಿ ಅನಾರೋಗ್ಯದಿಂದ ನಿನ್ನೆ ತಮಿಳುನಾಡಿನಲ್ಲಿ ಮೃತಪಟ್ಟಿದ್ದಾರೆ. ಇಂದು ಅಂತ್ಯಕ್ರಿಯೆ ನಡೆಯಲಿದೆ. ಇಂತಹ ನೋವಿನ ನಡುವೆ ವಿದ್ಯಾರ್ಥಿ ಪರೀಕ್ಷೆ ಬರೆದಿದ್ದಾನೆ. ಇತ್ತೀಚೆಗೆ ತಾಯಿಯನ್ನು ಕಳೆದುಕೊಂಡ ವಿದ್ಯಾರ್ಥಿ ಪರೀಕ್ಷೆ ಬರೆದು ಬಂದ ಬಳಿಕ ಅಂತ್ಯಕ್ರಿಯೆ ನಡೆಸಿದ ಘಟನೆ ಕೊಪ್ಪಳ ತಾಲೂಕಿನಲ್ಲಿ ನಡೆದಿತ್ತು.