ಪ್ರಜಾಸ್ತ್ರ ಸುದ್ದಿ
ಮುಂಬೈ(Mumbai): ಕಾರು ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ 7 ಜನರು ಸ್ಥಳದಲ್ಲಿಯೇ ಮೃತಪಟ್ಟ ದಾರುಣ ಘಟನೆ ನಾಸಿಕ್ ಜಿಲ್ಲೆಯಲ್ಲಿ ನಡೆದಿದೆ. ವಾಣಿ-ದಿಂಡೋರಿ ಹೆದ್ದಾರಿಯಲ್ಲಿ ಬುಧವಾರ ರಾತ್ರಿ ಸುಮಾರು 11.50ರ ಸುಮಾರಿಗೆ ಅಪಘಾತ ನಡೆದಿದೆ. ಘಟನೆ ಬಳಿಕ ಎರಡೂ ವಾಹನಗಳು ರಸ್ತೆ ಪಕ್ಕದಲ್ಲಿನ ಕಾಲುವೆಗೆ ಬಿದ್ದಿವೆ ಎಂದು ತಿಳಿದು ಬಂದಿದೆ.
ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಕುರಿತು ತನಿಖೆ ನಡೆಯುತ್ತಿದೆ. ಮೃತಪಟ್ಟವರು ಗುರುತು ತಿಳಿದು ಬರಬೇಕಿದ್ದು, ಎಲ್ಲಿಂದ ಎಲ್ಲಿಗೆ ಹೊರಟ್ಟಿದ್ದರು ಅನ್ನೋ ಮಾಹಿತಿ ತಿಳಿದು ಬರಬೇಕಿದೆ.