ಪ್ರಜಾಸ್ತ್ರ ಸುದ್ದಿ
ದೇವರ ಹಿಪ್ಪರಗಿ(Devara Hipparagi): ಆಟೋರಿಕ್ಷಾ ಮತ್ತು ಕಾರು ನಡುವೆ ಮುಖಮುಖಿ ಡಿಕ್ಕಿಯಾದ ಘಟನೆ ಪಟ್ಟಣದ ಹೊರ ವಲಯದ ದೇವೂರ ಗ್ರಾಮ ಬಳಿ ಗುರುವಾರ ನಡೆದಿದೆ. ಘಟನೆಯಲ್ಲಿ ಆಟೋ ಚಾಲಕ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಪಟ್ಟಣದ ನಿವಾಸಿ, ಆಟೋ ಚಾಲಕ ಅಜೀಜ ದಪ್ಪೇದಾರ ಕಾಲಿಗೆ ಗಂಭೀರ ಗಾಯವಾಗಿದ್ದು, ಸಾರ್ವಜನಿಕರು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಅದೃಷ್ಟವಶಾತ್ ಘಟನೆಯಲ್ಲಿ ಹಲವರು ಪಾರಾಗಿದ್ದಾರೆ. ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ದೇವರಹಿಪ್ಪರಗಿ ಠಾಣೆ ವ್ಯಾಪ್ತಿಯಲ್ಲಿ ಈ ಅಪಘಾತ ಘಟನೆ ನಡೆದಿದೆ. ಈ ಕುರಿತು ಇನ್ನು ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.