ಪ್ರಜಾಸ್ತ್ರ ಸುದ್ದಿ
ನವದೆಹಲಿ(New Delhi): ಉಗ್ರರ ದಾಳಿ ಬೆನ್ನಲ್ಲೇ ಜಮ್ಮು ಕಾಶ್ಮೀರದಲ್ಲಿ ಭಾರತೀಯ ಸೇನಾ ಪಡೆಯಿಂದ ಭಯೋತ್ಪಾದಕರನ್ನು ಸದೆಬಡಿಯುವ ಕಾರ್ಯಾಚರಣೆ ನಡೆಯುತ್ತಿದೆ. ಈ ವೇಳೆ ಯೋಧರೊಬ್ಬರು ಹುತಾತ್ಮರಾಗಿದ್ದಾರೆ ಎಂದು ತಿಳಿದು ಬಂದಿದೆ. ಉದಯಪುರ್ ದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಯೋಧರೊಬ್ಬರು ಗಂಭೀರವಾಗಿ ಗಾಯಗೊಂಡಿದ್ದರು. ಅವರಿಗೆ ಚಿಕಿತ್ಸೆ ನೀಡಲು ಪ್ರಯತ್ನಿಸಿದರೂ ಬದುಕುಳಿಯಲಿಲ್ಲವೆಂದು ತಿಳಿದು ಬಂದಿದೆ.
ಉಧಂಪುರ್ ನ ಬಸಂತ್ ಗಢದಲ್ಲಿ ಕಾರ್ಯಾಚರಣೆ ನಡೆಸಲಾಗುತ್ತಿದೆ. ಭಾರತೀಯ ಸೇನಾ ಪಡೆ ಹಾಗೂ ಜಮ್ಮು ಕಾಶ್ಮೀರ ಪೊಲೀಸರು ಜಂಟಿಯಾಗಿ ಭಯೋತ್ಪಾದಕರ ವಿರುದ್ಧ ಕಾರ್ಯಾಚರಣೆ ಕೈಗೆತ್ತಿಕೊಂಡಿದ್ದಾರೆ. ಪಹಲ್ಗಾಮ್ ನಲ್ಲಿ ನಡೆದ ದಾಳಿಗೆ ಪ್ರತಿಕಾರ ತೀರಿಸಿಕೊಳ್ಳಲು ಯೋಧರ ತೀವ್ರ ಹೋರಾಟ ನಡೆಸಿದ್ದಾರೆ.