ಪ್ರಜಾಸ್ತ್ರ ಸುದ್ದಿ
ಬೆಳಗಾವಿ(Belagavi): ಪ್ರಿಯಕರನ ಜೊತೆ ಸೇರಿಕೊಂಡು ಪತಿಯನ್ನು ಪತ್ನಿ ಹತ್ಯೆ ಮಾಡಿದ ಘಟನೆ ಜಿಲ್ಲೆಯ ರಾಮದುರ್ಗ ತಾಲೂಕಿನ ಜುನಿಪೇಟೆ ಗ್ರಾಮದಲ್ಲಿ ನಡೆದಿದೆ. ಈರಪ್ಪ ಆಡಿನ್ ಕೊಲೆಯಾದ ವ್ಯಕ್ತಿಯಾಗಿದ್ದಾನೆ. ಈ ಸಂಬಂಧ ಮೂವರನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ.
ಆರೋಪಿಗಳಾದ ಪತ್ನಿ ಕಮಲವ್ವ, ಪ್ರಿಯಕರ ಸಾಬಪ್ಪ ಮಾದರ ಹಾಗೂ ಇತನ ಸ್ನೇಹಿತ ಫಕೀರಪ್ಪ ಕಣವಿ ಎಂಬುವರನ್ನು ಬಂಧಿಸಲಾಗಿದೆ. ಈರಪ್ಪನನ್ನು ಚೆನ್ನಾಗಿ ಕುಡಿಸಿ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಹತ್ಯೆ ಮಾಡಿದ್ದಾರೆ. ನಂತರ ಪತ್ನಿ ತವರು ಮನೆ ಸೇರಿದ್ದಾಳೆ. ಶವ ಪತ್ತೆಯಾದ ಬಳಿಕ ಪೊಲೀಸರು ತನಿಖೆ ನಡೆಸಿದ್ದಾರೆ. ಮೊದಲು ಪತ್ನಿಯನ್ನು ವಿಚಾರಣೆ ಮಾಡಿದ್ದಾರೆ. ಆಕೆ ಬಾಯಿ ಬಿಟ್ಟಲ್ಲ. ನಂತರ ಪೊಲೀಸ್ ಶೈಲಿಯಲ್ಲಿ ತನಿಖೆ ನಡೆಸಿದಾಗ ಇವರ ಅಕ್ರಮ ಸಂಬಂಧ ಬಯಲಾಗಿದೆ.