Ad imageAd image

ಮೈಕ್ರೋ ಮಾರಿ: ಸಿಎಂ ತವರು ಜಿಲ್ಲೆಯಲ್ಲೇ ಮಹಿಳೆ ಆತ್ಮಹತ್ಯೆ!

Nagesh Talawar
ಮೈಕ್ರೋ ಮಾರಿ: ಸಿಎಂ ತವರು ಜಿಲ್ಲೆಯಲ್ಲೇ ಮಹಿಳೆ ಆತ್ಮಹತ್ಯೆ!
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಮೈಸೂರು(Mysore): ಮೈಕ್ರೋ ಫೈನಾನ್ಸ್ ಪ್ರಕರಣಗಳಿಂದ ದಿನದಿಂದ ದಿನಕ್ಕೆ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವವರ ಸಂಖ್ಯೆ ಏರಿಕೆಯಾಗುತ್ತಿದೆ. ಮಂಡ್ಯ, ಚಾಮರಾಜನಗರ, ಮೈಸೂರು ಭಾಗದಲ್ಲಿ ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿದ್ದು, ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ತವರು ಜಿಲ್ಲೆ ಮೈಸೂರಿನಲ್ಲಿ ಮಹಿಳೆಯೊಬ್ಬರು ವಿಷದ ಮಾತ್ರ ನುಂಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಂಜನಗೂಡು ತಾಲೂಕಿನ ಅಂಬಳೆ ಗ್ರಾಮದ ಜಯಶೀಲ(53) ಎನ್ನುವ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮನೆ, ಕೃಷಿ ಹಾಗೂ ಹಸು ಸಾಕಣಿಕೆಗಾಗಿ ಫೈವ್ ಸ್ಟಾರ್, ಐಐಎಫ್ಎಲ್ ಮೈಕ್ರೋ ಫೈನಾನ್ಸ್ ಗಳಲ್ಲಿ 5 ಲಕ್ಷ ರೂಪಾಯಿ ಸಾಲ ಮಾಡಿದ್ದಂತೆ. ಹೀಗಾಗಿ ತಿಂಗಳಿಗೆ 20 ಸಾವಿರ ರೂಪಾಯಿ ಬಡ್ಡಿ ಕಟ್ಟಬೇಕಿತ್ತು. ಇತ್ತೀಚೆಗೆ ಹಸು ಕೂಡ ಮೃತಪಟ್ಟಿದ್ದು ಜೀವನ ನಡೆಸುವುದು ಕಷ್ಟವಾಗಿತ್ತಂತೆ. ಸಾಲದಿಂದ ಹೊರ ಬರಲು ಆಗದೆ ವಿಷದ ಮಾತ್ರೆ ನುಂಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರಂತೆ. ನಂಜನಗೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

WhatsApp Group Join Now
Telegram Group Join Now
Share This Article