ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಮಹಿಳೆಯನ್ನು ಕತ್ತುಹಿಸುಕಿ ಕೊಲೆ ಮಾಡಿ ನಂತರ ಸೂಟ್ ಕೇಸ್ ನಲ್ಲಿಟ್ಟು ಚಂದಾಪುರದ ರೈಲ್ವೆ ಹಳಿಗಳ ಮೇಲೆ ಎಸೆದು ಹೋಗಿರುವುದು ಪತ್ತೆಯಾಗಿದೆ. ಸೂರ್ಯನಗರದ ಬಳಿ ಸೂಟ್ ಕೇಸ್ ಪತ್ತೆಯಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ಬೇರೆ ಕಡೆ ಮಹಿಳೆಯನ್ನು ಹತ್ಯೆ ಮಾಡಿ ಚಲಿಸುವ ರೈಲಿನಿಂದ ಎಸೆದು ಹೋಗಿರಬಹುದು ಎಂದು ಶಂಕಿಸಲಾಗಿದೆ.
ಪ್ರಾಥಮಿಕ ತನಿಖೆ ಪ್ರಕಾರ ಮಹಿಳೆಯ ಮೇಲೆ ಅತ್ಯಾಚಾರ ಅಥವ ಇತರೆ ಗಾಯದ ಗುರುತುಗಳಿಲ್ಲ. ಮೊದಲು ಮಹಿಳೆಯ ಗುರುತು ಪತ್ತೆ ಮಾಡುವುದು ಮೊದಲ ಆದ್ಯತೆಯಾಗಿದೆ. ಇದರ ತನಿಖೆಗಾಗಿ 6 ತಂಡಗಳನ್ನು ರಚನೆ ಮಾಡಲಾಗಿದೆ. ಅಪರಿಚಿತ ವ್ಯಕ್ತಿಗಳ ವಿರುದ್ಧ ಬಿಎನ್ಎಸ್ ಕಾಯ್ದೆ 103 ಹಾಗೂ 238ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.