ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಶುಕ್ರವಾರ ಮುಂಜಾನೆ ಯುವಕನೊಬ್ಬ ಮೆಟ್ರೋ ಹಳಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ಕೆಂಗೇರಿ ನಮ್ಮ ಮೆಟ್ರೋ ಸ್ಟೇಷನ್ ನಲ್ಲಿ ಮುಂಜಾನೆ ಸುಮಾರು 8.30ರ ವೇಳೆಗೆ ಈ ಘಟನೆ ನಡೆದಿದೆ. ನೇರಳೆ ಮಾರ್ಗದ ಹಳಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಸ್ಥಳಕ್ಕೆ ಮೆಟ್ರೋ ಸುರಕ್ಷತಾ ಸಿಬ್ಬಂದಿ, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆತ್ಮಹತ್ಯೆ ಮಾಡಿಕೊಂಡ ಯುವಕನ ಗುರುತು ಸೇರಿದಂತೆ ಇತರೆ ಮಾಹಿತಿಯನ್ನು ಕಲೆ ಹಾಕಲಾಗುತ್ತಿದೆ. ಈ ಘಟನೆಯಿಂದ ಮೈಸೂರು ರಸ್ತೆ-ಚಲ್ಲಘಟ್ಟ ನಡುವೆ ಸಂಚರಿಸುವ ಮೆಟ್ರೋ ಸ್ಥಗಿತಗೊಳಿಸಲಾಗಿದೆ. ವೈಟ್ ಫೀಲ್ಡ್ ನಿಂದ ಮೈಸೂರು ರಸ್ತೆವರೆಗೆ ಮಾತ್ರ ಸಂಚರಿಸಲಿವೆ.




