Ad imageAd image

ಹಲ್ಲುಗಳ ಕಾರಣಕ್ಕೆ ಯುವಕ ಆತ್ಮಹತ್ಯೆ

Nagesh Talawar
ಹಲ್ಲುಗಳ ಕಾರಣಕ್ಕೆ ಯುವಕ ಆತ್ಮಹತ್ಯೆ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಚಿಕ್ಕಮಗಳೂರು(Chikkamagaloru): ಸುಮಾರು 4 ವರ್ಷಗಳ ಹಿಂದೆ ನಡೆದ ಅಪಘಾತದಲ್ಲಿ 17 ಹಲ್ಲುಗಳನ್ನು ಕಳೆದುಕೊಂಡಿದ್ದ ಯುವಕ ಮಾನಸಿಕವಾಗಿ ಕುಗ್ಗಿ ಹೋಗಿದ್ದ. ಇದರಿಂದ ಹೊರ ಬರಲು ಆಗದೆ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆಗೆ(Suicide) ಶರಣಾಗಿದ್ದಾನೆ. ಕೊಪ್ಪ ತಾಲೂಕಿನ ಭುವನಕೋಟೆ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, 18 ವರ್ಷದ ವಿಘ್ನೇಶ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಮಗನನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಹೇಳ ತೀರದಾಗಿದೆ.

ಕೊಪ್ಪ ಪಟ್ಟಣದ ಐಟಿಐ(ITI) ಕಾಲೇಜಿನಲ್ಲಿ ಓದುತ್ತಿದ್ದ. ಅಪಘಾತದಲ್ಲಿ 17 ಹಲ್ಲುಗಳನ್ನು ಕಳೆದುಕೊಂಡಿದ್ದ ಯುವಕ ಆಗಾಗ ಆಸ್ಪತ್ರೆಗೆ ಹೋಗಿ ಬರುತ್ತಿದ್ದ. ಆದರೆ, ಇದರಿಂದ ಹೊರ ಬರಲು ಆಗದೆ ಮಾನಸಿಕವಾಗಿ ಸಾಕಷ್ಟು ನೊಂದುಕೊಂಡಿದ್ದ. ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ನೇಣು ಹಾಕಿಕೊಂಡಿದ್ದಾನೆ. ಏನಾದರೂ ಸಾಧಿಸಿ ಎಲ್ಲವನ್ನು ಮೆಟ್ಟಿ ನಿಲ್ಲುವ ಬದಲು ಈ ಮೂಲಕ ದುಡುಕಿನ ನಿರ್ಧಾರ ತೆಗೆದುಕೊಂಡು ಜೀವ ಕಳೆದುಕೊಂಡಿದ್ದಾನೆ. ಜಯಪುರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

WhatsApp Group Join Now
Telegram Group Join Now
Share This Article