ಪ್ರಜಾಸ್ತ್ರ ಸುದ್ದಿ
ಸಿಂದಗಿ(Sindagi): ತಾಲೂಕಿನ ಕನ್ನೊಳ್ಳಿ ಗ್ರಾಮದ ಹತ್ತಿರ ಬೊಮ್ಮನಜೋಗಿ ಕ್ರಾಸ್ ಬಳಿಯ ಹೆದ್ದಾರಿ ಪಕ್ಕದಲ್ಲಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಯಾದಗಿರಿಯ ಮಲ್ಲ.ಕೆ ಗ್ರಾಮದ ಶಿವನಗೌಡ ಗಿರಿಯಪ್ಪಗೌಡ ಪಾಟೀಲ(30) ಮೃತ ಯುವಕ ಎಂದು ತಿಳಿದು ಬಂದಿದೆ.
ಆತ್ಮಹತ್ಯೆಗೆ ಸಂಬಂಧಿಸಿದಂತೆ ಯಾವುದೇ ಕಾರಣಗಳು ತಿಳಿದುಬಂದಿಲ್ಲ. ಕುಡಿತದ ಚಟದಿಂದ ಈ ರೀತಿ ಮಾಡಿಕೊಂಡಿದ್ದಾನೆ ಎಂದು ಹೇಳಲಾಗುತ್ತಿದೆ. ಆದರೆ, ಯುವಕ ಊರು ಬಿಟ್ಟು ಇಲ್ಲಿ ಬಂದು ಯಾಕೆ ಆತ್ಮಹತ್ಯೆ ಮಾಡಿಕೊಂಡ ಅನ್ನೋ ಪ್ರಶ್ನೆ ಮೂಡಿದೆ. ಈ ಪ್ರಕರಣ ಕುರಿತು ಸಿಂದಗಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.




