ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಸಿಲಿಕಾನ್ ಸಿಟಿಯಲ್ಲಿ ಬಿಬಿಎಂ ವಿದ್ಯಾರ್ಥಿನಿಯ ಕೊಲೆಯಾಗಿದೆ. ಆಕೆಯ ಸ್ನೇಹಿತ ಕೊಲೆ ಮಾಡಿದ್ದಾನೆ ಎಂದು ಹೇಳಲಾಗುತ್ತಿದೆ. ಆಂಧ್ರಪ್ರದೇಶ ಮೂಲದ ದೇವಿಶ್ರೀ(21) ಕೊಲೆಯಾದ ಯುವತಿಯಾಗಿದ್ದಾಳೆ. ಪ್ರೇಮವರ್ಧಮ್ ಕೊಲೆ ಮಾಡಿದ ಆರೋಪಿ ಎಂದು ತಿಳಿದು ಬಂದಿದೆ.
ಮಾದನಾಯಕನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಿಮ್ಮೇನಹಳ್ಳಿ ಹತ್ತಿರ ಕೃತ್ಯ ನಡೆದಿದೆ. ಭಾನುವಾರ ಮುಂಜಾನೆ ಆಕೆಯನ್ನು ಇನ್ನೋರ್ವ ಸ್ನೇಹಿತೆಯ ರೂಮಿಗೆ ಕರೆದುಕೊಂಡು ಹೋಗಿದ್ದಾನೆ. ಬಳಿಕ ಅವರಿಬ್ಬರ ನಡುವೆ ಏನಾಗಿದೆಯೋ ಗೊತ್ತಿಲ್ಲ. ಆಕೆಯನ್ನು ಕೊಲೆ ಮಾಡಿ ಪರಾರಿಯಾಗಿದ್ದಾನೆ. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಪತ್ತೆ ಕಾರ್ಯ ನಡೆಸಿದ್ದಾರೆ.




