ಪ್ರಜಾಸ್ತ್ರ ಸುದ್ದಿ
ಹುಬ್ಬಳ್ಳಿ(Hubballi): ಪ್ಯಾರಾಮೆಡಿಕಲ್ ವಿದ್ಯಾರ್ಥಿನಿಯೊಬ್ಬಳು ಮಾತ್ರೆಗಳನ್ನು ತೆಗೆದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಗಳವಾರ ನಡೆದಿದೆ. ಈ ಪ್ರಕರಣ ಸಂಬಂಧ ಆರೋಪಿಯನ್ನು ಬುಧವಾರ ಬಂಧಿಸಲಾಗಿದೆ. ಯುವತಿಯ ಮಾಜಿ ಪ್ರಿಯಕರನನ್ನು ವಿದ್ಯಾನಗರ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಸಧ್ಯ ಯುವತಿ ಪ್ರಾಣಾಪಾಯದಿಂದ ಪಾರಾಗಿದ್ದು, ಈ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.
ಯುವತಿ ಹಾಗೂ ಆರೋಪಿ ಇಬ್ಬರು ಕುಂದಗೋಳು ಮೂಲದವರು. ಇಬ್ಬರು ಪ್ರೀತಿಸುತ್ತಿದ್ದರು. ಇಬ್ಬರು ಮುಂದೆ ಬ್ರೇಕಪ್ ಮಾಡಿಕೊಂಡಿದ್ದಾರೆ. ಆದರೆ, ಯುವಕ ಆಕೆಯ ಖಾಸಗಿ ಫೋಟೋಗಳನ್ನು, ಮೆಸೇಜ್ ಗಳನ್ನು ಇಟ್ಟುಕೊಂಡು ಕಿರುಕುಳ ನೀಡುತ್ತಿದ್ದನಂತೆ. ಆಕೆಗೆ ಬ್ಲ್ಯಾಕ್ ಮೇಲ್ ಮಾಡುತ್ತಿದ್ದನಂತೆ. ಹಲ್ಲೆ ಸಹ ಮಾಡಿದ್ದ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಸಂಬಂಧ ಎಫ್ಐಆರ್ ದಾಖಲಾಗಿದ್ದು, ಆರೋಪಿ ಯುವಕನನ್ನು ಬಂಧಿಸಲಾಗಿದೆ.