ಪ್ರಜಾಸ್ತ್ರ ಸುದ್ದಿ
ಜಮಖಂಡಿ(Jamakandi): ಪಡಿತರ ಅಕ್ಕಿಯನ್ನು ಅಕ್ರಮ ಸಾಗಣೆ ಹಾಗೂ ಮಾರಾಟ ನಿಯಂತ್ರಿಸಲು ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗಿದೆ. ಇದಕ್ಕಾಗಿ ತಂಡವೊಂದನ್ನು ರಚಿಸಲಾಗಿದೆ ಎಂದು ಉಪವಿಭಾಗಾಧಿಕಾರಿ ಶ್ವೇತಾ ಬೀಡಕರ್ ಹೇಳಿದ್ದಾರೆ. ಅಕ್ರಮವಾಗಿ ಪಡಿತರ ಅಕ್ಕಿಯ ಮಾರಾಟ ಕಂಡು ಬಂದಲ್ಲಿ ಆಹಾರ ನಿರೀಕ್ಷಕರು, ತಹಶೀಲ್ದಾರ್ ಅವರಿಗೆ ಮಾಹಿತಿ ನೀಡಬೇಕೆಂದು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ಬಿಪಿಎಲ್ ಕಾರ್ಡ್ ಹೊಂದಿರುವ ಪ್ರತಿ ಕುಟುಂಬದ ಪ್ರತಿ ಸದಸ್ಯರಿಗೆ 10 ಕೆಜಿ ಅಕ್ಕಿ ವಿತರಿಸಲಾಗುತ್ತಿದೆ. ಬಡವರಿಗೆ ಅನುಕೂಲ ಕಲಿಸಲು ಸರ್ಕಾರ ಈ ಯೋಜನೆ ಜಾರಿಗೆ ತಂದಿದ್ದು, ದುರುಪಯೋಗ ಪಡಿಸಿಕೊಳ್ಳಬಾರದು. ಸಚಿವರು, ಶಾಸಕರು, ಜಿಲ್ಲಾಧಿಕಾರಿಗಳು ಈ ವಿಷಯ ಗಂಭೀರವಾಗಿ ಪರಿಗಣಿಸಿದ್ದು, ಕಠಿಣ ಕ್ರಮ ಜರುಗಿಸಲು ಆದೇಶ ನೀಡಿದ್ದಾರೆ. ಮುಧೋಳ, ರಬಕವಿ-ಬನಹಟ್ಟಿ ಹಾಗೂ ಜಮಖಂಡಿಯಲ್ಲಿ ಪಡಿತರ ಅಕ್ಕಿಯನ್ನು ಕಾಳ ಸಂತೆಯಲ್ಲಿ ಮಾರಾಟ ಮಾಡುವ ಜಾಲ ಕಾರ್ಯಪ್ರವೃತ್ತವಾಗಿದ್ದು ಕಂಡು ಬಂದಿದೆ. ಆ ಹಿನ್ನಲೆಯಲ್ಲಿ ಪಡಿತರ ಅಕ್ಕಿ ಮಾರಾಟ ಮಾಡುವ ಸಾರ್ವಜನಿಕರ ಪಡಿತರ ಚೀಟಿ ರದ್ದುಗೊಳಿಸಲಾಗುವುದು, ಮಾರಾಟಗಾರರ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಎಂದರು.




