ಸಿಂದಗಿ ಜನತೆ ಲೋಕಾಯುಕ್ತರಿಗೆ ತಮ್ಮ ಸಮಸ್ಯೆ ತಿಳಿಸಬಹುದು..

191

ಪ್ರಜಾಸ್ತ್ರ ಸುದ್ದಿ

ವಿಜಯಪುರ: ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು ಜಿಲ್ಲೆಯ ಸಿಂದಗಿ ತಾಲೂಕು ಆಡಳಿತ ಭವನದಲ್ಲಿ ಜುಲೈ 10ರಂದು ಬೆಳಗ್ಗೆ 11 ಗಂಟೆಯಿಂದ ಸಾರ್ವಜನಿಕ ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ.

ಲೋಕಾಯುಕ್ತ ಪೊಲೀಸ್ ಅಧೀಕ್ಷಕರು (9364062528) ಉಪಾಧೀಕ್ಷಕರ  (9364062557), ಪೊಲೀಸ್ ಇನ್‌ಸ್ಪೆಕ್ಟರ್-1 (9364062640), ಪೊಲೀಸ್ ಇನ್‌ಸ್ಪೆಕ್ಟರ್-2 (9364062639) ಇವರು ಅಂದು ಬೆಳಿಗ್ಗೆ 11 ಗಂಟೆಯಿಂದ ಸಾರ್ವಜನಿಕ ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ.

ಅಹವಾಲು ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಭರ್ತಿ ಮಾಡಿದ ಮತ್ತು ನೋಟರಿಯಿಂದ ಅಫಿಡವಿಟ್ ಮಾಡಿಸಿದ ಅರ್ಜಿಗಳನ್ನು ಸ್ವೀಕರಿಸಲಾಗುವುದು. ಸರ್ಕಾರಿ ಕಚೇರಿಗಳಲ್ಲಿ ಅಧಿಕೃತವಾಗಿ ಕೆಲಸಗಳನ್ನು ಮಾಡಿಕೊಡುವಲ್ಲಿ ವಿಳಂಬ ಹಾಗೂ ಲಂಚದ ಬೇಡಿಕೆ ಇನ್ನಿತರೆ ತೊಂದರೆ ನೀಡುತ್ತಿರುವ ಅಧಿಕಾರಿ, ಸಿಬ್ಬಂದಿ ವಿರುದ್ದ ಸಾರ್ವಜನಿಕರು ದೂರುಗಳನ್ನು ನೀಡಬಹುದು. ಸ್ಥಳದಲ್ಲಿ ಪರಿಹಾರ ಕಂಡುಕೊಳ್ಳಬಹುದಾದ ದೂರುಗಳನ್ನು ಅಲ್ಲಿನ ಸ್ಥಳೀಯ ಅಧಿಕಾರಿಗಳ ಸಹಯೋಗದಲ್ಲಿ ಇತ್ಯರ್ಥಪಡಿಸಲು ಪ್ರಯತ್ನಿಸಲಾಗುವುದು ಹಾಗೂ ಸರ್ಕಾರಿ ಅಧಿಕಾರಿಗಳು ಅಕ್ರಮ ಆಸ್ತಿ ಸಂಪಾದನೆ, ಸರ್ಕಾರಿ ಹಣದ ದುರುಪಯೋಗ, ಕಳಪೆ ಕಾಮಗಾರಿ ಹಾಗೂ ಇತರೆ ಯಾವುದೇ ರೀತಿಯ ದೂರುಗಳಿಗಾಗಿ ಕಚೇರಿ ದೂರವಾಣಿ 08352-255333, 257786 ಹಾಗೂ 295074 ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ ಎಂದು ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾದ ಟಿ. ಮಲ್ಲೇಶ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




error: Content is protected !!