ಪ್ರಜಾಸ್ತ್ರ ಸುದ್ದಿ
ಮುಂಬೈ(Mumbai): 180ಕ್ಕೂ ಹೆಚ್ಚು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದೆ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಅಮರಾವತಿಯಲ್ಲಿ ಮೊಹಮ್ಮದ್ ಅಯಾಜ್ ಅಲಿಯಾಸ್ ತನ್ವೀರ್ ಎಂಬಾತನನ್ನು ಬಂಧಿಸಲಾಗಿದೆ. ಈತ ಪತರವಾಡ ನಿವಾಸಿಯಾಗಿದ್ದು, ಈತನ ಮೊಬೈಲ್ ಚಿತ್ರೀಕರಿಸಿದ 350ಕ್ಕೂ ಹೆಚ್ಚು ಅಶ್ಲೀಲ ವಿಡಿಯೋಗಳಿವೆ ಎಂದು ಹೇಳಲಾಗುತ್ತಿದೆ.
ಬಿಜೆಪಿ ರಾಜ್ಯಸಭೆ ಸದಸ್ಯ ಅನಿಲ್ ಬೋಂಡೆ ನೀಡಿದ ದೂರಿನ ಮೇರೆಗೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಬುಧವಾರ ಈತನನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, 7 ದಿನಗಳ ಕಾಲ ಪೊಲೀಸ್ ವಶಕ್ಕೆ ನೀಡಲಾಗಿದೆ. ಈ ಪ್ರಕರಣದ ತನಿಖೆಗೆ ಎಸ್ಐಟಿ ತಂಡವನ್ನು ರಚನೆ ಮಾಡಲಾಗಿದೆ. ಆರೋಪಿ ತನ್ವೀರ್ ಬಾಲಕಿಯರನ್ನು ಗುರಿಯಾಗಿಸಿಕೊಂಡು ಪ್ರೀತಿಯ ಬಲೆಯಲ್ಲಿ ಅವರನ್ನು ಬೀಳಿಸಿ ಮುಂಬೈ, ಪುಣೆಗೆ ಕರೆದುಕೊಂಡು ಹೋಗಿ ಅಶ್ಲೀಲ ವಿಡಿಯೋ ರೆಕಾರ್ಡ್ ಮಾಡುತ್ತಿದ್ದನಂತೆ. ಅಲ್ಲದೆ ಬ್ಲ್ಯಾಕ್ ಮೇಲ್ ಮಾಡಿ ಬಲವಂತವಾಗಿ ವೇಶ್ಯಾವಾಟಿಕೆಗೆ ತಳ್ಳುತ್ತಿದ್ದನಂತೆ. ಈ ಕುರಿತು ಪೊಲೀಸರು ಸಮಗ್ರ ತನಿಖೆ ನಡೆಸಿದ್ದಾರೆ.




