Ad imageAd image

ನೆರಳಿನಂತೆ ಸಾಧನೆಗಳು ನಮ್ಮನ್ನು ಹಿಂಬಾಲಿಸುತ್ತವೆ: ಡಿಸಿ ಭೂಬಾಲನ್

ವಿದ್ಯಾರ್ಥಿಗಳು ಓದಿನೊಂದಿಗೆ ಪಠ್ಯೇತರ ಚಟುವಟಿಕೆಗಳಿಗೂ ಪ್ರಾಮುಖ್ಯತೆ ನೀಡಿ ಸುಂದರ ಭದ್ರ ಭವಿಷ್ಯಕ್ಕೆ ಬುನಾದಿ ಹಾಕಿಕೊಳ್ಳುವ ಮೂಲಕ ವಿದ್ಯಾರ್ಥಿ ಜೀವನದ ಸದುಪಯೋಗ ಪಡೆದುಕೊಳ್ಳಬೇಕು

Nagesh Talawar
ನೆರಳಿನಂತೆ ಸಾಧನೆಗಳು ನಮ್ಮನ್ನು ಹಿಂಬಾಲಿಸುತ್ತವೆ: ಡಿಸಿ ಭೂಬಾಲನ್
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ವಿಜಯಪುರ(Vijayapura): ವಿದ್ಯಾರ್ಥಿಗಳು ಓದಿನೊಂದಿಗೆ ಪಠ್ಯೇತರ ಚಟುವಟಿಕೆಗಳಿಗೂ ಪ್ರಾಮುಖ್ಯತೆ ನೀಡಿ ಸುಂದರ ಭದ್ರ ಭವಿಷ್ಯಕ್ಕೆ ಬುನಾದಿ ಹಾಕಿಕೊಳ್ಳುವ ಮೂಲಕ ವಿದ್ಯಾರ್ಥಿ ಜೀವನದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಹೇಳಿದರು. ಹಾಕಿ ಮಾಂತ್ರಿಕ ಮೇಜರ್(Major Dhyan Chand) ಧ್ಯಾನಚಂದ್ ಅವರ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ಆಗಸ್ಟ್ 29 ಗುರುವಾರದಂದು ರಾಷ್ಟ್ರೀಯ ಕ್ರೀಡಾ(national sports day) ದಿನಾಚರಣೆಯ ಅಂಗವಾಗಿ ಅಲ್ಪಸಂಖ್ಯಾತರ ನಿರ್ದೇಶನಾಲಯ ಹಾಗೂ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯ ನಿರ್ವಹಿಸುತ್ತಿರುವ ತಿಕೋಟ ತಾಲೂಕಿನ ಅರಕೇರಿಯಲ್ಲಿರುವ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆಯಲ್ಲಿ ಆಯೋಜಿಸಿದ್ದ ಅಂತರ್ ಶಾಲಾ ಹಾಗೂ ಕಾಲೇಜುಗಳ ಕ್ರೀಡಾ ಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ನೆರಳು ನಮ್ಮನ್ನು ಹಿಂಬಾಲಿಸಿದಂತೆ ನಮ್ಮ ಸಾಧನೆಗಳು ನಮ್ಮನ್ನು ಹಿಂಬಾಲಿಸುತ್ತವೆ. ಮೇಜರ್ ದ್ಯಾನಚಂದ್ ಅವರ ಜನ್ಮದಿನವಾದ ಇಂದು ರಾಷ್ಟ್ರೀಯ ಕ್ರೀಡಾ ದಿನಾಚರಣೆಯಾಗಿ ಆಚರಿಸಲಾಗುತ್ತಿದೆ. ಅವರು ಹಾಕಿಯಲ್ಲಿ ತಮ್ಮದೆಯಾದ ಛಾಪು ಮೂಡಿಸಿ, ಹಾಕಿ ಮಾಂತ್ರಿಕರಾಗಿದ್ದು ನಮ್ಮೆಲ್ಲರಿಗೂ ಸ್ಫೂರ್ತಿಯಾಗಿದ್ದಾರೆ. ಅವರ ಸಾಧನೆ ಅವಲೋಕಿಸಿ, ಅವರ ಸತತ ಶ್ರಮ ಕಠಿಣ ಅಭ್ಯಾಸಗಳಿಂದ ಮಾಡಿರುವ ಅವರ ಸಾಧನೆಯನ್ನು ವಿದ್ಯಾರ್ಥಿಗಳು ಪ್ರೆರೆಣೆಯಾಗಿ ಪಡೆದು ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಉತ್ತಮ ಸಾಧನೆ ಮಾಡಿ ಜಿಲ್ಲೆಗೆ ಕೀರ್ತಿ ತರುವಂತಾಗಲಿ ಎಂದು ಆಶಿಸಿದರು.

ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಅವರು ಮಾತನಾಡಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಅತ್ಯುತ್ತಮ ಸಾಧನೆಗೈಯ್ಯಲು ಹಲವು ಅವಕಾಶ ಒದಗಿಸಿದ್ದು, ಇದರ ಸದುಪಯೋಗ ಪಡೆದುಕೊಂಡು ಉತ್ತಮ ಸಾಧನೆಗೆ ಮುಂದಾಗಬೇಕು ಎಂದು ಹೇಳಿದರು. ಈ ಸಂದರ್ಭದಲ್ಲಿ ವಿಜಯಪುರ ಐ.ಆರ್.ಬಿ ಕಮಾಂಡೆಂಟ್ ನಂದಕುಮಾರ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಪ್ರಶಾಂತ ಪೂಜಾರಿ, ಅರಕೇರಿಯ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ ಪ್ರಾಂಶುಪಾಲರಾದ ರೇಖಾ ಬಾರ್ಕಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

WhatsApp Group Join Now
Telegram Group Join Now
Share This Article