ಪ್ರಜಾಸ್ತ್ರ ಸುದ್ದಿ
ವಿಜಯಪುರ(Vijayapura): ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಕಣಕಾಲ ಗ್ರಾಮದ ನ್ಯೂ ಇಂಗ್ಲೀಷ್ ಮೀಡಿಯಂ ಶಾಲೆಯ ಸಿಬ್ಬಂದಿ ಬಸಿಯೂಟದ ಹಾಲಿನ ಪೌಡರ್ ಅನ್ನು ಅಕ್ರಮವಾಗಿ ಸಾಗಾಟ ಮಾಡಿರುವುದು ಇತ್ತೀಚೆಗೆ ಕಂಡು ಬಂದಿದೆ. ಈ ಸಂಬಂಧ ಶಾಲೆಯ ಆಡಳಿತ ಮಂಡಳಿ ಠರಾವು ಹೊರಡಿಸಿ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಗಮನಕ್ಕೆ ತೆಗೆದುಕೊಂಡು ಬಂದಿದ್ದಾರೆ. ಬಿಸಿಯೂಟದ ಹಾಲಿನ ಪೌಡರ್ ಅಕ್ರಮ ಸಾಗಾಟದ ಆರೋಪದ ಮೇಲೆ ಸಿಬ್ಬಂದಿ ವಿರುದ್ಧ ಇದೀಗ ಶಿಸ್ತು ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗಳು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.