ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaluru): ಸ್ಯಾಂಡಲ್ ವುಡ್ ನಟ ಅಜಯ್ ರಾವ್ ದಾಂಪತ್ಯದಲ್ಲಿ ಬಿರುಕು ಮೂಡಿದೆ ಎಂದು ಹೇಳಲಾಗುತ್ತಿದೆ. ನಟ ಅಜಯ್ ರಾವ್ ಪತ್ನಿ ಸ್ವಪ್ನಾ ಅವರು ಪತಿಯ ವಿರುದ್ಧ ದೂರು ದಾಖಲಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಕೌಟುಂಬಿಕ ಕಲಹದಡಿಯಲ್ಲಿ ಪ್ರಕರಣ ದಾಖಲಿಸಿದ್ದು, ಅದು ವಿಚ್ಛೇದನದ ಹಂತಕ್ಕೆ ಬಂದಿದೆ ಎನ್ನುವ ಮಾತುಗಳು ಕೇಳಿ ಬರುತ್ತಿವೆ.
ಅಜಯ್ ರಾವ್ ಹಾಗೂ ಸ್ವಪ್ನಾ ಅವರು ಡಿಸೆಂಬರ್ 14, 2014ರಲ್ಲಿ ಮದುವೆಯಾಗಿದ್ದಾರೆ. ಇವರಿಗೆ ಒಂದು ಮಗಳಿದ್ದಾಳೆ. ಚಿತ್ರರಂಗದಲ್ಲಿ ಸಾಕಷ್ಟು ಏಳುಬೀಳುಗಳನ್ನು ಕಂಡಿದ್ದಾರೆ. ಅವರು ಇತ್ತೀಚೆಗೆ ಯುದ್ಧಕಾಂಡ-2 ಎನ್ನುವ ಚಿತ್ರವನ್ನು ನಿರ್ಮಿಸಿ ನಟಿಸಿದರು. ಇದರಿಂದ ಸಾಕಷ್ಟು ಸಾಲ ಮಾಡಿಕೊಂಡಿದ್ದಾರೆ. ಅವರ ನೆಚ್ಚಿನ ಕಾರು ಮಾರಿದ ಘಟನೆ ಸಹ ಸಾಕಷ್ಟು ವೈರಲ್ ಆಗಿತ್ತು. ಆದರೆ, ಚಿತ್ರ ಅಷ್ಟೊಂದು ಯಶಸ್ಸು ಕಾಣಲಿಲ್ಲ. ಇದರ ನಡುವೆ ಸಂಸಾರಿಕ ಜೀವನದಲ್ಲಿ ಬಿರುಕು ಮೂಡಿದೆ.