ಪ್ರಜಾಸ್ತ್ರ ಸುದ್ದಿ
ಹೈದ್ರಾಬಾದ್(Hyderabad): ಪುಷ್ಪ-2 ಚಿತ್ರದ ಪ್ರಿಮಿಯೇರ್ ಶೋ ವೇಳೆ ಉಂಟಾದ ಕಾಲ್ತುಳಿತದಲ್ಲಿ ಮಹಿಳೆಯೊಬ್ಬರು ಮೃತಪಟ್ಟಿದ್ದರು. ಈ ಪ್ರಕರಣ ಸಂಬಂಧ ನಟ ಅಲ್ಲು ಅರ್ಜುನ್, ಸಂಧ್ಯಾ ಚಿತ್ರ ಮಂದಿರದ ಮಾಲೀಕ ಸೇರಿ ಮೂವರ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಇದೀಗ ಪೊಲೀಸರು ನಟ ಅಲ್ಲು ಅರ್ಜುನ್ ಬಂಧಿಸಿದ್ದಾರೆ. ಅವರ ನಿವಾಸದಲ್ಲಿ ಬಂಧಿಸಲಾಗಿದೆ ಎಂದು ವರದಿಯಾಗಿದೆ.
ಡಿಸೆಂಬರ್ 4ರಂದು ಪ್ರಿಮಿಯರ್ ಶೋ ಆಯೋಜನೆ ಮಾಡಲಾಗಿತ್ತು. ಈ ವೇಳೆ ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು ಸೇರಿದ್ದರು. ಆಗ ಕಾಲ್ತುಳಿತ ಉಂಟಾಗಿ 35 ವರ್ಷದ ಮಹಿಳೆ ಮೃತಪಟ್ಟಿದ್ದಾಳೆ. 4 ವರ್ಷದ ಮಗು ಗಾಯಗೊಂಡಿದ್ದು, ಇನ್ನು ಚಿಕಿತ್ಸೆ ಪಡೆಯುತ್ತಿದೆ. ಘಟನೆ ಹಿನ್ನಲೆಯಲ್ಲಿ ಮಹಿಳೆಯ ಕುಟುಂಬಸ್ಥರು ಪ್ರಕರಣ ದಾಖಲಿಸಿದ್ದರು. ಪೊಲೀಸರು ಭಾರತೀಯ ದಂಡ ಸಂಹಿತೆಯ 105, 118(1) ಅಡಿಯಲ್ಲಿ ನಟ ಅಲ್ಲು ಅರ್ಜುನ್, ಭದ್ರತಾ ಸಿಬ್ಬಂದಿ ಹಾಗೂ ಚಿತ್ರಮಂದಿರ ಮಾಲೀಕನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಎಫ್ಐಆರ್ ರದ್ದು ಕೋರಿ ನಟ ಕೋರ್ಟ್ ಮೆಟ್ಟಿಲು ಏರಿದ್ದಾರೆ. ಅದರ ವಿಚಾರಣೆ ನಡೆಯಬೇಕಿದೆ.