ಪ್ರಜಾಸ್ತ್ರ ಸುದ್ದಿ
ಹೈದ್ರಾಬಾದ್(Hyderabad): ಕಳೆದ ಡಿಸೆಂಬರ್ 4ರಂದು ಪುಷ್ಪ-2 ಸಿನಿಮಾದ ಪ್ರಿಮಿಯರ್ ಶೋ ವೇಳೆ ನಡೆದಿದ್ದ ಕಾಲ್ತುಳಿತದಲ್ಲಿ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಈ ಪ್ರಕರಣ ಸಂಬಂಧ ಪೊಲೀಸರು ವಶಕ್ಕೆ ಪಡೆದಿದ್ದರು. ಅವರನ್ನು ಕೋರ್ಟ್ ಮುಂದೆ ಹಾಜರು ಪಡಿಸಿದ್ದರು. ಇದೀಗ ಕೋರ್ಟ್ 14 ದಿನ ನ್ಯಾಯಾಂಗ ಬಂಧನ ವಿಧಿಸಿದೆ. ಇದರಿಂದಾಗಿ ಟಾಲಿವುಡ್ ಗೆ ಬಿಗ್ ಶಾಕ್ ಆಗಿದೆ. ಅವರ ಅಭಿಮಾನಿಗೂ ದೊಡ್ಡ ಶಾಕ್ ಆಗಿದೆ.
ಮೃತ ಮಹಿಳೆ ಪತಿ ಡಿಸೆಂಬರ್ 5ರಂದು ಚಿಕ್ಕಡಪಲ್ಲಿ ಪೊಲೀಸ್ ಠಾಣೆಯಲ್ಲಿ ನಟ ಅಲ್ಲು ಅರ್ಜುನ್, ಅವರ ಭದ್ರತಾ ಪಡೆ ಹಾಗೂ ಸಂಧ್ಯಾ ಚಿತ್ರಮಂದಿರದ ಆಡಳಿತದ ವಿರುದ್ಧ ದೂರು ದಾಖಲಿಸಿದ್ದರು. ಪ್ರಕರಣದ ವಿಚಾರಣೆ ವೇಳೆ ಪೊಲೀಸರು ಮೂವರನ್ನು ಬಂಧಿಸಿದ್ದರು. ಈಗ ಅಲ್ಲು ಅರ್ಜನ್ ಬಂಧನವಾಗಿದೆ 14 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಹೀಗಾಗಿ ಐಕಾನ್ ಸ್ಟಾರ್ ಜೈಲಿಗೆ ಹೋಗಿದ್ದಾರೆ. ಇನ್ನೊಂದು ಕಡೆ ನಟ ಎಫ್ಐಆರ್ ರದ್ದು ಕೋರಿ ಕೋರ್ಟ್ ಗೆ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಯಬೇಕಿದೆ.