ಪ್ರಜಾಸ್ತ್ರ ಸುದ್ದಿ
ನವದೆಹಲಿ(New Delhi): ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನಗೆ ಕರ್ನಾಟಕ ಹೈಕೋರ್ಟ್ ನೀಡಿದ್ದ ನಿಯಮಿತ ಜಾಮೀನು ಸುಪ್ರೀಂ ಕೋರ್ಟ್ ರದ್ದು ಮಾಡಿದೆ. ಈ ಮೂಲಕ ನಟ ದರ್ಶನ್ ಸೇರಿದಂತೆ ಇತರೆ ಆರೋಪಿಗಳಿಗೆ ದೊಡ್ಡ ಶಾಕ್ ನೀಡಿದೆ. ಡೆವಿಲ್ ಚಿತ್ರದ ಶೂಟಿಂಗ್ ನಲ್ಲಿರುವ ನಟ ದರ್ಶನಗೆ ಈಗ ಮತ್ತೆ ಬಂಧನವಾಗಲಿದೆ. ಹೈಕೋರ್ಟ್ ನೀಡಿದ್ದ ಜಾಮೀನು ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಕರ್ನಾಟಕ ಸರ್ಕಾರ ಮೇಲ್ಮನವಿ ಸಲ್ಲಿಸಿತ್ತು.
ಜುಲೈ 24ರಂದು ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್, ಕರ್ನಾಟಕ ಹೈಕೋರ್ಟ್ ಜಾಮೀನು ಆದೇಶಕ್ಕೆ ತೀವ್ರ ಕೆಂಡಮಂಡಲವಾಗಿತ್ತು. ಆದೇಶ ಹೊರಡಿಸಿರುವುದನ್ನು ನೋಡಿದರೆ ಪ್ರಕರಣದಿಂದ ಖುಲಾಸೆಗೊಳಿಸುವ ಹಿನ್ನಲೆಯಿದೆ ಎಂದು ಟೀಕಿಸಿತ್ತು. ಇದೀಗ ಜಾಮೀನು ರದ್ದಾಗಿರುವ ಹಿನ್ನಲೆಯಲ್ಲಿ ನಟ ದರ್ಶನ್, ಗೆಳತಿ ಪವಿತ್ರಾಗೌಡ ಸೇರಿದಂತೆ ಇತರೆ ಆರೋಪಿಗಳನ್ನು ಇದೀಗ ಬಂಧನವಾಗಲಿದೆ.