ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್, ಪವಿತ್ರಾಗೌಡ ಸೇರಿ 17 ಆರೋಪಿಗಳು ಸೋಮವಾರ 64ನೇ ಸಿಸಿಹೆಚ್ ನ್ಯಾಯಾಲಯಕ್ಕೆ ಹಾಜರಾದರು. ಈ ವೇಳೆ ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು ಸೇರಿದ್ದರು. ಹೀಗಾಗಿ ಕೋರ್ಟ್ ಇವರ ಅರ್ಜಿಯ ವಿಚಾರಣೆ ಮುಂದೂಡಿತ್ತು. ಭದ್ರತೆಗೆ ಹಲಸೂರುಗೇಟ್ ಠಾಣೆ ಪೊಲೀಸರನ್ನು ಸಹ ನಿಯೋಜಿಸಲಾಗಿತ್ತು.
ಈಗಾಗಲೇ ದೋಷಾರೋಪ ಪಟ್ಟಿಯನ್ನು ಸಿದ್ಧಪಡಿಸಲಾಗಿದ್ದು, ದರ್ಶನ್, ಪವಿತ್ರಾಗೌಡ ಸೇರಿ ಎಲ್ಲರೂ ಇದನ್ನು ನಿರಾಕರಿಸಿದ್ದಾರೆ. ನ್ಯಾಯಮೂರ್ತಿಗಳು ದೋಷಾರೋಪವನ್ನು ಓದಿ ಹೇಳಿದರು. ಇದನ್ನು ಕೇಳಿಸಿಕೊಂಡ ಆರೋಪಿಗಳನ್ನು ಒಪ್ಪಿಕೊಳ್ಳದೆ ನಿರಾಕರಿಸಿದರು. ನವೆಂಬರ್ 10ಕ್ಕೆ ಸಾಕ್ಷಿಗಳ ವಿಚಾರಣೆ ನಡೆಸುವುದಾಗಿ ಹೇಳಿದ ಕೋರ್ಟ್ ಮುಂದೂಡಿತು. ದರ್ಶನ್, ಪವಿತ್ರಾಗೌಡ ಪರಪ್ಪನ ಅಗ್ರಹಾರ ಜೈಲಿಗೆ ವಾಪಸ್ ಕರೆದುಕೊಂಡು ಹೋಗಲಾಯಿತು.




