ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಕಾಮಿಡಿ ಕಿಲಾಡಿಗಳು ಶೋನ ನಟ ಮಡೆನೂರು ಮನು ವಿರುದ್ಧ ಅತ್ಯಾಚಾರ ಆರೋಪ ಕೇಳಿ ಬಂದಿದೆ. ಸಹ ಕಲಾವಿದೆ ಈ ಗಂಭೀರ ಆರೋಪ ಮಾಡಿದ್ದು, ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಅತ್ಯಾಚಾರ ಪ್ರಕರಣ ದಾಖಲಾಗುತ್ತಿದ್ದಂತೆ ನಟ ಮಡೆನೂರು ಮನು ತಲೆಮರೆಸಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಪೊಲೀಸರು ಇವರಿಗಾಗಿ ಹುಡುಕಾಟ ನಡೆಸಿದ್ದಾರೆ.
ನಟ ಮಡೆನೂರು ಮನು ಕುಲದಲ್ಲಿ ಕೀಳ್ಯಾವೋದು ಅನ್ನೋ ಸಿನಿಮಾದಲ್ಲಿ ನಾಯಕ ನಟನಾಗಿ ಅಭಿನಯಿಸಿದ್ದಾರೆ. ಈ ಚಿತ್ರ ಬಿಡುಗಡೆಗೆ ಸಿದ್ಧವಾಗಿದೆ. ಇದರ ಪ್ರಚಾರವನ್ನು ಅವರು ಜೋರಾಗಿ ನಡೆಸಿದ್ದು, ಸಾರ್ವಜನಿಕ ಸ್ಥಳಗಳಿಗೆ ತೆರಳಿ ವ್ಯಕ್ತಿಕವಾಗಿಯೂ ಪ್ರಚಾರ ನಡೆಸಿದ್ದರು. ಹೀಗಿರುವಾಗ ಇವರ ವಿರುದ್ಧ ಅತ್ಯಾಚಾರ ಆರೋಪ ಕೇಳಿ ಬಂದಿದೆ.