Ad imageAd image

ನಟ ಪ್ರಕಾಶ್ ರಾಜ್ ತಾಯಿ ನಿಧನ

Nagesh Talawar
ನಟ ಪ್ರಕಾಶ್ ರಾಜ್ ತಾಯಿ ನಿಧನ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಹೈದ್ರಾಬಾದ್(Hydrebad): ಕನ್ನಡ ಮೂಲದ ಬಹುಭಾಷಾ ನಟ ಪ್ರಕಾಶ್ ರಾಜ್ ಅವರ ತಾಯಿ ಸವರ್ಣಲತಾ(86) ಅವರು ಸೋಮವಾರ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಇವರ ನಿಧನಕ್ಕೆ ಆಂಧ್ರಪ್ರದೇಶದ ಉಪ ಮುಖ್ಯಮಂತ್ರಿ, ನಟ ಪವನ್ ಕಲ್ಯಾಣ್ ಸಂತಾಪ ಸೂಚಿಸಿದ್ದಾರೆ.

ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಬರೆದಿದ್ದು, ನಟ ಪ್ರಕಾಶ್ ರಾಜ್ ಅವರು ತಾಯಿ ನಿಧನರಾಗಿರುವುದು ತಿಳಿದು ತುಂಬಾ ಬೇಸರವಾಯಿತು. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಅಂತಾ ಹೇಳಿದ್ದಾರೆ. ಕನ್ನಡ ಸೇರಿದಂತೆ ದಕ್ಷಿಣ ಭಾರತದ ಚಿತ್ರರಂಗದ ಗಣ್ಯರು ಹಾಗೂ ಅಭಿಮಾನಿಗಳು ಸಂತಾಪ ಸೂಚಿಸಿದ್ದಾರೆ.

WhatsApp Group Join Now
Telegram Group Join Now
Share This Article