ಪ್ರಜಾಸ್ತ್ರ ಸುದ್ದಿ
ಚೆನ್ನೈ(Chennai): ಸೂಪರ್ ಸ್ಟಾರ್ ರಜನಿಕಾಂತ್, ಸ್ಟಾರ್ ನಟ ಧನುಷ್ ಅವರ ಮನೆಗೆ ಬಾಂಬ್ ಬೆದರಿಕೆ ಹಾಕಲಾಗಿದೆ ಎಂದು ತಿಳಿದು ಬಂದಿದೆ. ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ತೇನಾಂಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಟರಿಗೆ ಸಂಬಂಧಿಸಿದ ಮನೆಗಳಿಗೆ ಬಾಂಬ್ ಇಡಲಾಗಿದೆ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕರ ಇ-ಮೇಲ್ ಗೆ ಸಂದೇಶ ಬಂದಿದೆ.




