ಪ್ರಜಾಸ್ತ್ರ ಸುದ್ದಿ
ಹೈದರಾಬಾದ್(Hyderabad): ಆನ್ಲೈನ್ ಬೆಟ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ರಾಣಾ ದಗ್ಗುಬಾಟಿ ನಗರದಲ್ಲಿರುವ ಇಡಿ ಕಚೇರಿಗೆ ಸೋಮವಾರ ಹಾಜರಾದರು. ಈ ಸಂಬಂಧ ನೋಟಿಸ್ ನೀಡಲಾಗಿತ್ತು. ಹೀಗಾಗಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ಎದುರು ನಟ ರಾಣಾ ಹಾಜರಾಗಿ ವಿಚಾರಣೆ ಎದುರಿಸುತ್ತಿದ್ದಾರೆ.
ಆಗಸ್ಟ್ 6ರಂದು ನಟ ವಿಜಯ್ ದೇವರಕೊಂಡ ಹಾಜರಾಗಿದ್ದರು. ಜುಲೈ 30ರಂದು ಬಹುಭಾಷಾ ನಟ ಪ್ರಕಾಶ್ ರಾಜ್ ಹಾಜರಾಗಿದ್ದರು. ಆನ್ಲೈನ್ ಬೆಟ್ಟಿಂಗ್ ವಿಚಾರಕ್ಕೆ ಸಂಬಂಧಿಸಿದಂತೆ ಹಲವು ನಟ, ನಟಿಯರು, ಸೋಷಿಯಲ್ ಮೀಡಿಯಾ ಇನ್ ಫ್ಲುಯೆನ್ಸರ್ ಗಳಿಗೆ ನೋಟಿಸ್ ನೀಡಲಾಗಿದೆ. 5 ರಾಜ್ಯಗಳಲ್ಲಿ ಈ ಸಂಬಂಧ ಎಫ್ಐಆರ್ ದಾಖಲಾಗಿವೆ.