ಪ್ರಜಾಸ್ತ್ರ ಸುದ್ದಿ
ಮುಂಬೈ(Mumbai): ಬಾಲಿವುಡ್ ನಟ ಸೈಫ್ ಅಲಿಖಾನ್ ಗೆ ದುಷ್ಕರ್ಮಿಯೊಬ್ಬ ಚಾಕು ಇರಿದ ಘಟನೆ ನಡೆದಿದೆ. ಹಲವು ಸಾರಿ ಚಾಕುವಿನಿಂದ ಇರಿದಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪಶ್ಚಿಮ ಬಾಂದ್ರಾದಲ್ಲಿರುವ ನಿವಾಸದಲ್ಲಿ ಬುಧವಾರ ಮಧ್ಯರಾತ್ರಿ ಸುಮಾರು 2.30ರ ಸುಮಾರಿಗೆ ನಡೆದಿದೆ. ಗಂಭೀರವಾಗಿ ಗಾಯಗೊಂಡಿರುವ ನಟನನ್ನು ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಸ್ತ್ರಚಿಕಿತ್ಸೆ ನೀಡಲಾಗಿದೆ ಎಂದು ಹೇಳಲಾಗುತ್ತಿದೆ.
ದರೋಡೆಕೋರನೊಬ್ಬ ಮನೆಗಳ್ಳತನಕ್ಕೆ ಬಂದಿದ್ದ. ಈ ವೇಳೆ ಚಾಕುವಿನಿಂದ ಹಲ್ಲೆ ಮಾಡಿದ್ದಾನೆ. ಬೆನ್ನುಮೂಳೆ ಸೇರಿ ಹಲವು ಕಡೆ ಗಂಭೀರವಾದ ಗಾಯಗಳಾಗಿವೆ. ಮನೆಯವರು ಎಚ್ಚರಗೊಳ್ಳುತ್ತಿದ್ದಂತೆ ದುಷ್ಕರ್ಮಿ ಎಸ್ಕೇಪ್ ಆಗಿದ್ದಾನೆ. ತಜ್ಞ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರಂತೆ. ಈ ಕುರಿತು ಮುಂಬೈ ಕ್ರೈಂ ಬ್ರ್ಯಾಂಚ್ ಪೊಲೀಸರು ತನಿಖೈ ಕೈಗೊಂಡಿದ್ದಾರೆ.