ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಸ್ಯಾಂಡಲ್ ವುಡ್ ನಟ ಶಿವರಾಜಕುಮಾರ್ ಅವರಿಗೆ ಮೂತ್ರಕೋಶದ ಕ್ಯಾನ್ಸರ್ ಸರ್ಜರಿ ಮಾಡಲಾಗಿದೆ. ಅದು ಯಶಸ್ವಿಯಾಗಿದೆ ಎಂದು ವೈದ್ಯರು, ಪತ್ನಿ ಗೀತಾ ಶಿವರಾಜಕುಮಾರ್ ಹಾಗೂ ಭಾವ ಮಧು ಬಂಗಾರಪ್ಪ ಮಾಹಿತಿ ನೀಡಿದ್ದಾರೆ. ಅಮೆರಿಕಾದ ಮಿಯಾಮಿ ಕ್ಯಾನ್ಸರ್ ಇನ್ಸ್ ಟ್ಯೂಟ್ ನಲ್ಲಿ ಮಂಗಳವಾರ ಶಸ್ತ್ರಚಿಕಿತ್ಸೆ ನಡೆಸಲಾಗಿದೆ.
ಡಾ.ಮುರುಗೇಶ್ ಮನೋಹರನ್ ಅವರ ಮಾರ್ಗದರ್ಶನದಲ್ಲಿ ಸರ್ಜರಿ ಮಾಡಲಾಗಿದೆ. ಕ್ಯಾನ್ಸರ್ ತಗುಲಿದ್ದ ಮೂತ್ರಕೋಶವನ್ನು ಸಂಪೂರ್ಣವಾಗಿ ತೆಗೆದು ಹಾಕಲಾಗಿದೆ. ಅವರದೆ ಕರಳು ಬಳಸಿ ಕೃತಕ ಮೂತ್ರಕೋಶವನ್ನು ಮತ್ತೆ ಅಳವಡಿಸಲಾಗಿದೆ. ಅವರ ಆರೋಗ್ಯ ಸ್ಥಿರವಾಗಿದೆ. ಶೀಘ್ರದಲ್ಲಿ ಚೇತರಿಸಿಕೊಂಡು ವಿಡಿಯೋ ಮೂಲಕ ಅವರೆ ಮಾತನಾಡುತ್ತಾರೆ. ಅವರು ಆರೋಗ್ಯಕ್ಕಾಗಿ ಪ್ರಾರ್ಥಿಸಿದ ಪ್ರತಿಯೊಬ್ಬರಿಗೂ ಧನ್ಯವಾದಗಳನ್ನು ಕುಟುಂಬಸ್ಥರು ತಿಳಿಸಿದ್ದಾರೆ.