Ad imageAd image

ನಟಿ ರಮ್ಯಾ ಪರ ನಿಂತ ನಟ ಶಿವರಾಜಕುಮಾರ್ ದಂಪತಿ

Nagesh Talawar
ನಟಿ ರಮ್ಯಾ ಪರ ನಿಂತ ನಟ ಶಿವರಾಜಕುಮಾರ್ ದಂಪತಿ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಬೆಂಗಳೂರು(Bengaloru): ನಟ ದರ್ಶನ್ ಅಭಿಮಾನಿಗಳೆಂದು ಹೇಳಿಕೊಂಡಿರುವವರು ನಟಿ, ಮಾಜಿ ಸಂಸದೆ ರಮ್ಯಾಗೆ ಅಶ್ಲೀಲ ಮೆಸೇಜ್, ಜೀವ ಬೆದರಿಕೆ ಹಾಕಿದ್ದಾರೆ ಎಂದು ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ. ಈ ಬಗ್ಗೆ ಮಾಧ್ಯಮಗಳ ಎದುರು ಸಹ ಏನೆಲ್ಲ ಆಗಿದೆ ಅನ್ನೋದರ ಬಗ್ಗೆಯೂ ಹೇಳಿದ್ದಾರೆ. ಈಗ ನಟಿ ರಮ್ಯಾ ಪರ ನಟ ಶಿವರಾಜಕುಮಾರ್ ನಿಂತುಕೊಂಡಿದ್ದಾರೆ. ಅವರ ನಿಸ್ಟಾಗ್ರಾಮ್ ನಲ್ಲಿ ಈ ಬಗ್ಗೆ ಪೋಸ್ಟ್ ಮಾಡಿದ್ದಾರೆ.

‘ರಮ್ಯಾ ಅವರ ವಿರುದ್ಧ ಬಳಸಿರುವ ಪದಗಳು ಖಂಡನೀಯ. ಯಾವ ಮಹಿಳೆಯ ವಿರುದ್ಧವೂ ಆ ರೀತಿ ಮಾತನಾಡುವುದು ಸರಿಯಲ್ಲ. ಅದನ್ನು ನಾವು ಸಹಿಸಬಾರದು. ಮಹಿಳೆಯರನ್ನು ತಾಯಿಯಾಗಿ, ಅಕ್ಕನಾಗಿ, ಮಗಳಾಗಿ, ಮಡದಿಯಾಗಿ ಮತ್ತು ಮೊಟ್ಟಮೊದಲು ಒಬ್ಬ ವ್ಯಕ್ತಿಯಾಗಿ ಗೌರವಿಸುವುದು ತುಂಬಾ ಮುಖ್ಯ. ಸೋಷಿಯಲ್ ಮೀಡಿಯಾ ತುಂಬಾ ಬಲಿಷ್ಠವಾದ ಅಸ್ತ್ರ. ಅದನ್ನು ತಮ್ಮ ಏಳಿಗೆಗಾಗಿ ಬಳಸಬೇಕೇ ಹೊರತು, ಅವಾಚ್ಯ ಶಬ್ಧಗಳಿಂದ ನಿಂದಿಸಿ, ದ್ವೇಷ-ಅಸೂಯೆಯನ್ನು ಬಿತ್ತಲು ಬಳಸಬಾರದು. ನಿಮ್ಮ ನಿಲುವು ಸರಿಯಿದೆ ರಮ್ಯಾ. ನಿಮ್ಮ ಜೊತೆಗೆ ನಾವು ಸದಾ ನಿಲ್ಲುತ್ತೇವೆ’. ಇಂತಿ ಶಿವರಾಜಕುಮಾರ್, ಗೀತಾ ಶಿವರಾಜಕುಮಾರ್ ಎಂದು ಪೋಸ್ಟ್ ಮಾಡಲಾಗಿದೆ.

WhatsApp Group Join Now
Telegram Group Join Now
Share This Article