ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ರಾಜ್ಯ ಸರ್ಕಾರ ಘೋಷಣೆ ಮಾಡಿದ್ದ ರಾಜ್ಯ ಪ್ರಶಸ್ತಿಯನ್ನು ನಟ ಸುದೀಪ ನಿರಾಕರಿಸಿದ್ದಾರೆ. ಪೈಲ್ವಾನ್ ಸಿನಿಮಾದಲ್ಲಿನ ನಟನೆಗಾಗಿ 2019ನೇ ಸಾಲಿನ ಅತ್ಯುತ್ತಮ ನಟ ಪ್ರಶಸ್ತಿ ಘೋಷಣೆ ಮಾಡಿದೆ. ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು ಬೇರೊಬ್ಬ ನಟನಿಗೆ ನೀಡುವಂತೆ ಮನವಿ ಮಾಡಿದ್ದಾರೆ. ಕರ್ನಾಟಕ ಸರ್ಕಾರ ಹಾಗೂ ತೀರ್ಪುಗಾರರ ಸಮಿತಿಯಲ್ಲಿ ಮನವಿ ಮಾಡಿದ್ದು, ಯಾವುದೇ ಪ್ರಶಸ್ತಿಯ ನಿರೀಕ್ಷೆಗಳಿಲ್ಲದೆ ಜನರನ್ನು ಮನರಂಜಿಸುವುದು ನನ್ನ ಕೆಲಸವಾಗಿದೆ. ನನ್ನನ್ನು ಪ್ರಶಸ್ತಿಗೆ ಆಯ್ಕೆ ಮಾಡಿರುವುದು ನನ್ನ ಕೆಲಸವನ್ನು ಮತ್ತಷ್ಟು ಉತ್ತಮ ರೀತಿಯಲ್ಲಿ ಮಾಡಲು ಪ್ರೇರಣೆಯಾಗಿದೆ ಎಂದಿದ್ದಾರೆ.