ಪ್ರಜಾಸ್ತ್ರ ಸುದ್ದಿ
ಚೆನ್ನೈ: ತಮಿಳು ಚಿತ್ರರಂಗದ ಖ್ಯಾತ ನಟ, ನಿರ್ಮಾಪಕ ವಿಶಾಲ್ ಇಂದು ತಮ್ಮ 48ನೇ ಹುಟ್ಟು ಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಇದೆ ವೇಳೆ ನಟಿ ಸಾಯಿ ಧನ್ಶಿಕಾ ಜೊತೆಗೆ ನಿಶ್ಚಿತಾರ್ಥ ಸಹ ಮಾಡಿಕೊಂಡಿದ್ದಾರೆ. ಈ ಮೂಲಕ ಅಭಿಮಾನಿಗಳಿಗೆ ಶುಭ ಸುದ್ದಿ ಕೊಟ್ಟಿದ್ದಾರೆ. ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ನಟ ವಿಶಾಲ್ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಎಲ್ಲಡೆಯಿಂದ ಶುಭ ಕೋರಿದ ಪ್ರತಿಯೊಬ್ಬರಿಗೂ ಧನ್ಯವಾದಗಳು ಎಂದಿದ್ದಾರೆ.
ಈ ಹಿಂದೆ ಅನಿಶಾ ಅಲ್ಲಾ ರೆಡ್ಡಿ ಜೊತೆಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಆದರೆ, ಅದು ಅರ್ಧಕ್ಕೆ ಮುರಿದು ಬಿತ್ತು. ಆಕೆ ಉದ್ಯಮಿಯೊಬ್ಬರನ್ನು ಮದುವೆಯಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಅದು ಅಲ್ಲದೆ ಇತ್ತೀಚಿಗೆ ವಿಶಾಲ್ ಆರೋಗ್ಯದಲ್ಲಿ ಸಾಕಷ್ಟು ಏರುಪೇರು ಕಂಡು ಬಂದಿತ್ತು. ಕಾರ್ಯಕ್ರಮವೊಂದರ ವೇದಿಕೆಯ ಮೇಲೆಯೇ ಬೀಳುತ್ತಿದ್ದರು. ಇನ್ನು ಕೆಲವು ಮೂಲಗಳ ಪ್ರಕಾರ ಆಗಸ್ಟ್ 29ರಂದು ಮದುವೆ ಮಾಡಿಕೊಳ್ಳಲು ಯೋಚಿಸಿದ್ದರಂತೆ. ಆದರೆ, ಅದು ಇದೀಗ ಮುಂದೂಡಿಕೆಯಾಗಿದೆ.