ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಯುವ ನಿರ್ದೇಶಕ, ನಟಿ ಅಮೂಲ್ಯ ಸಹೋದರ ದೀಪಕ್ ಅರಸ್(46) ಶುಕ್ರವಾರ ನಿಧನರಾಗಿದ್ದಾರೆ. ಕಿಡ್ನಿ ಸಮಸ್ಯೆಯಿಂದ ಚಿಕಿತ್ಸೆ ಪಡೆಯುತ್ತಿದ್ದ ಅವರು ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಈ ಕುರಿತು ನಟಿ ಅಮೂಲ್ಯ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ನನ್ನ ಪ್ರೀತಿಯ ಸಹೋದರ ದೀಪಣ್ಣ ಅವರು ನಮ್ಮನ್ನು ಅಗಲಿದ್ದಾರೆ ಎಂದು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ದೀಪಕ್ ಅರಸ್ ಅವರು ಮನಸಾಲಜಿ, ಶುಗರ್ ಫ್ಯಾಕ್ಟರಿ ಅನ್ನೋ ಸಿನಿಮಾಗಳನ್ನು ನಿರ್ದೇಶನ ಮಾಡಿದ್ದಾರೆ.