ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaluru): ನಟಿ, ಮಾಜಿ ಸಂಸದೆ ರಮ್ಯಾಗೆ ಸಾಮಾಜಿಕ ಜಾಲತಾಣದಲ್ಲಿ ಬೆದರಿಕೆ ಹಾಕಿದ ಪ್ರಕರಣ ಸಂಬಂಧ ಮತ್ತಿಬ್ಬರನ್ನು ಬಂಧಿಸಲಾಗಿದೆ. ಸಿಸಿಬಿ ಪೊಲೀಸರು ರಾಜೇಶ್ ಹಾಗೂ ಭುವನಗೌಡ ಅನ್ನೋ ಇಬ್ಬರನ್ನು ಬಂಧಿಸಿದ್ದಾರೆ. ಈ ಮೂಲಕ ಬಂಧಿತರ ಸಂಖ್ಯೆ 4ಕ್ಕೆ ಏರಿಕೆಯಾಗಿದೆ. ಈ ಮೂದಲು ಗಂಗಾಧರ ಹಾಗೂ ಓಬಣ್ಣ ಎಂಬುವರನ್ನು ಬಂಧಿಸಲಾಗಿದೆ.
ಇನ್ ಸ್ಟಾಗ್ರಾಮ್ ನ 47 ಅಕೌಂಟ್ ಗಳಿಂದ ನಟಿ ರಮ್ಯಾಗೆ ಅಶ್ಲೀಲ ಹಾಗೂ ಬೆದರಿಕೆ ಮೆಸೇಜ್ ಕಳಿಸಿದ್ದಾರೆ ಎಂದು ತಿಳಿದು ಬಂದಿದೆ. ಅವುಗಳ ಪರಿಶೀಲನೆ ನಡೆಸಲಾಗುತ್ತಿದೆ ಎಂದು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ತಿಳಿಸಿದ್ದಾರೆ. ಬೆಂಗಳೂರು, ಚಿತ್ರದುರ್ಗ, ಕೋಲಾರ, ಬಳ್ಳಾರಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಹುಡುಕಾಟ ನಡೆಸಲಾಗುತ್ತಿದೆ ಎಂದು ತಿಳಿಸಲಾಗಿದೆ.