ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಅಕ್ರಮವಾಗಿ ಚಿನ್ನವನ್ನು ಸಾಗಾಟ(Gold Smuggling) ಮಾಡುತ್ತಿದ್ದರು ಎನ್ನುವ ಆರೋಪದ ಮೇಲೆ ನಟಿ ರನ್ಯಾ ರಾವ್ ಅವರನ್ನು ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ದುಬೈನಿಂದ ಬೆಂಗಳೂರಿಗೆ ಬಂದ ಅವರನ್ನು ಡಿಆರ್ ಐ(DRI Police) ತಂಡ ಬಂಧಿಸಿ ವಿಚಾರಣೆ ನಡೆಸಿದೆ. ನಟಿ ರನ್ಯಾ ರಾವ್ 14.8 ಕೆಜಿ ಚಿನ್ನ ಸಾಗಾಟ ಮಾಡುತ್ತಿದ್ದರು ಎನ್ನುವ ಆರೋಪ ಕೇಳಿ ಬಂದಿದೆ. ಡಿಜಿಪಿ ರಾಮಚಂದ್ರ ರಾವ್ ಅವರ ಸಂಬಂಧಿ ಎಂದು ಹೇಳಲಾಗುತ್ತಿದೆ.
ನಟಿ ರನ್ಯಾ ವಿರುದ್ಧ ನಾಲ್ಕು ಬಾರಿ ಚಿನ್ನ ಸಾಗಾಟದ ಆರೋಪವಿದೆ. ಖಚಿತ ಮಾಹಿತಿ ಮೇರೆಗೆ ವಿಮಾನ ನಿಲ್ದಾಣದಲ್ಲಿ ಡಿಆರ್ ಐ ಪೊಲೀಸರು ವಶಕ್ಕೆ ಪಡೆಯುತ್ತಾರೆ. ಕಳೆದ ರಾತ್ರಿ ಈ ಒಂದು ಘಟನೆ ನಡೆದಿದೆ. ರನ್ಯಾ ರಾವ್ ಕನ್ನಡ ಸೇರಿದಂತೆ ಸೌಥ್ ಸಿನಿ ದುನಿಯಾದ ಹಲವು ಚಿತ್ರಗಳಲ್ಲಿ ನಟಿಸಿದ್ದಾರೆ. ಕಿಚ್ಚ ಸುದೀಪ್ ನಟನೆಯ(Manikya Film) ಮಾಣಿಕ್ಯ, ಗೋಲ್ಡನ್ ಸ್ಟಾರ್ ಗಣೇಶ್ ನಟನೆಯ ಪಟಾಕಿ(Pataki Film) ಸಿನಿಮಾಗಳಲ್ಲಿ ಜೋಡಿಯಾಗಿ ಕಾಣಿಸಿಕೊಂಡಿದ್ದಾರೆ.