ಪ್ರಜಾಸ್ತ್ರ ಸುದ್ದಿ
ನವದೆಹಲಿ(New Delhi): ನಟಿ, ರೂಪದರ್ಶಿ ಶೆಫಾಲಿ ಜರಿವಾಲಾ ಶುಕ್ರವಾರ ತಡರಾತ್ರಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. 42 ವರ್ಷದ ನಟಿ ಕನ್ನಡದ ಹುಡುಗರು ಚಿತ್ರದ ಐಟಿಂ ಹಾಡಿನಲ್ಲಿ ಡ್ಯಾನ್ಸ್ ಮಾಡಿದ್ದರು. ಪತಿ ಪರಾಗ್ ತ್ಯಾಗಿ ಪತ್ನಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಮಾರ್ಗಮಧ್ಯದಲ್ಲಿಯೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಶೆಫಾಲಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳಿಸಲಾಗಿದೆ. ಕೆಲ ವರ್ಷಗಳಿಂದ ಮೂರ್ಚೆ ರೋಗದಿಂದ ಬಳಲುತ್ತಿದ್ದರಂತೆ. ಶಫಾಲಿ 2002ರಲ್ಲಿ ಆಲ್ಬಂ ಸಾಂಗ್ ನಲ್ಲಿ ಕಾಂಟಾ ಲಗಾ ವಿಡಿಯೋ ಹಾಡಿನ ಮೂಲಕ ಸಾಕಷ್ಟು ಜನಪ್ರಿಯರಾಗಿದ್ದರು. ಹಲವು ಬಾಲಿವುಡ್ ಸಿನಿಮಾಗಳಲ್ಲಿ ನಟಿಸಿದರು. ಬಿಗ್ ಬಾಸ್ ಸೀಸನ್ 13ರಲ್ಲಿ ಸ್ಪರ್ಧಿಯಾಗಿದ್ದರು.